ADVERTISEMENT

Covid-19 India Update: ದೆಹಲಿಯಲ್ಲಿ ಒಂದೇ ದಿನ 1024 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 28 ಮೇ 2020, 17:08 IST
Last Updated 28 ಮೇ 2020, 17:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ194 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವೆಬ್‌ಸೈಟ್ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ವೈರಸ್‌ನ 86110 ಸಕ್ರಿಯ ಪ್ರಕರಣಗಳಿವೆ. ಈವರೆಗೆ 67691 ಮಂದಿ ಚೇತರಿಸಿಕೊಂಡಿದ್ದು 4531 ಮಂದಿ ಸಾವಿಗೀಡಾಗಿದ್ದಾರೆ.

ಅಹಮದಾಬಾದ್‌ನಲ್ಲಿ ಗುರುವಾರ 247 ಹೊಸ ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 11344ಕ್ಕೆ ತಲುಪಿದೆ. ಇವತ್ತು 16 ರೋಗಿಗಳು ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 780ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ದೆಹಲಿಗೆ ಸಮೀಪವಿರುವ ಹರಿಯಾಣದಎಲ್ಲ ಗಡಿಯನ್ನು ಬಂದ್ ಮಾಡಲಾಗುವುದು ಎಂದು ಹರಿಯಾಣದ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

ದೆಹಲಿಯಲ್ಲಿ ಒಂದೇ ದಿನ 1,024 ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 16,281ಕ್ಕೇರಿದೆ.

ಮಹಾರಾಷ್ಟ್ರದಲ್ಲಿ 2598 ಹೊಸ ಪ್ರಕರಣಗಳು ವರದಿಯಾಗಿದ್ದು 85ಮಂದಿ ಸಾವಿಗೀಡಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 344 ಪ್ರಕರಣ ದಾಖಲಾಗಿದ್ದು, ತಮಿಳುನಾಡಿನಲ್ಲಿ 827 ಮಂದಿಗೆ ಸೋಂಕು ದೃಢಪಟ್ಟಿದೆ. ತಮಿಳುನಾಡಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,372ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಸಚಿವ ಸಿ.ವಿಜಯಭಾಸ್ಕರ್ ಹೇಳಿದ್ದಾರೆ.

ಪಂಜಾಬ್‌ನಲ್ಲಿ 19 ಹೊಸ ಪ್ರಕರಣಗಳು ದಾಖಲಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 2158 ಆಗಿದೆ.

ಉತ್ತರಾಖಂಡದಲ್ಲಿ 24 ಹೊಸ ಪ್ರಕರಣಗಳು ವರದಿಯಾಗಿದ್ದು, ಪ್ರಕರಣಗಳ ಸಂಖ್ಯೆ 493 ಆಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಕೇರಳದಲ್ಲಿ ಗುರುವಾರ 84 ಮಂದಿಗೆ ಕೋವಿಡ್-19 ರೋಗ ದೃಢಪಟ್ಟಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.