ADVERTISEMENT

Covid-19 India Update: ಮಹಾರಾಷ್ಟ್ರದಲ್ಲಿ ಒಟ್ಟು17 ಲಕ್ಷಕ್ಕೂ ಹೆಚ್ಚು ಪ್ರಕರಣ

ಏಜೆನ್ಸೀಸ್
Published 5 ನವೆಂಬರ್ 2020, 16:03 IST
Last Updated 5 ನವೆಂಬರ್ 2020, 16:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಕಳೆದ ಒಂದು ವಾರದಿಂದ ಕಡಿಮೆಯಾಗಿದ್ದ ಕೋವಿಡ್‌ ಪಾಸಿಟಿವ್‌ ಪ್ರಕರಣಗಳ ಸಂಖ್ಯೆಯಲ್ಲಿ ಗುರುವಾರ ಮತ್ತೆ ಹೆಚ್ಚಳವಾಗಿದೆ.

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಕೋವಿಡ್‌–19 ದೃಢಪಟ್ಟ 5,246 ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 17 ಲಕ್ಷ ದಾಟಿದೆ.

ಇದೇ ಅವಧಿಯಲ್ಲಿ ಸೋಂಕಿನಿಂದ 11,000 ಮಂದಿ ಗುಣಮುಖರಾಗಿದ್ದಾರೆ ಹಾಗೂ 117 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 17,03,444 ಪ್ರಕರಣಗಳ ಪೈಕಿ ಈವರೆಗೂ 44,804 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ದೆಹಲಿಯಲ್ಲಿ 6,715 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4.16 ಲಕ್ಷ ದಾಟಿದೆ. ಕೇರಳದಲ್ಲಿ 6,820 ಪ್ರಕರಣಗಳೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4,55,467 ಆಗಿದೆ. ಇದೇ ಅವಧಿಯಲ್ಲಿ 7,669 ಮಂದಿ ಗುಣಮುಖರಾಗಿದ್ದಾರೆ. ಹರಿಯಾಣದಲ್ಲಿ 2,064 ಹೊಸ ಪ್ರಕರಣಗಳು ದಾಖಲಾಗಿವೆ.

ಗುರುವಾರ ಬೆಳಗ್ಗಿನ ವರೆಗೂ ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 50,209 ಹೊಸ ಪ್ರಕರಣಗಳು ದೃಢಪಟ್ಟಿದ್ದು, 704 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 83,64,086 ಕ್ಕೆ ಏರಿಕೆಯಾಗಿದೆ. ಆ ಪೈಕಿ 1,24,315 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈವರೆಗೆ 77,11,809 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 5,27,962 ಸಕ್ರಿಯ ಪ್ರಕರಣಗಳು ಇವೆ.

ದೇಶದಲ್ಲಿ ನ.5 ರವರೆಗೆ ಒಟ್ಟು 11,42,08,384 ಕೊರೊನಾ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.