ADVERTISEMENT

Covid-19 India Update: ಶೇ. 93ಕ್ಕಿಂತ ಹೆಚ್ಚು ಸೋಂಕಿತರು ಗುಣಮುಖ

ಏಜೆನ್ಸೀಸ್
Published 14 ನವೆಂಬರ್ 2020, 17:03 IST
Last Updated 14 ನವೆಂಬರ್ 2020, 17:03 IST
ಸಾಂದರ್ಭಿಕ ಚಿತ್ರ – ಕೃಪೆ: ಎಫ್‌ಪಿ
ಸಾಂದರ್ಭಿಕ ಚಿತ್ರ – ಕೃಪೆ: ಎಫ್‌ಪಿ   

ನವದೆಹಲಿ: ದೇಶದಲ್ಲಿ ಕೋವಿಡ್‌–19 ಸೋಂಕಿತರ ಸಂಖ್ಯೆ 87.7 ಲಕ್ಷಕ್ಕೆ ಏರಿಕೆಯಾಗಿದ್ದು, ಇದರಲ್ಲಿ 81 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ. 93.05ಕ್ಕೆ ಏರಿಕೆಯಾಗಿದೆ.

ಇಂದು ಮಧ್ಯಪ್ರದೇಶದಲ್ಲಿ ಹೊಸದಾಗಿ 1,012 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.83 ಲಕ್ಷಕ್ಕೆ ಏರಿಕೆಯಾಗಿದೆ. ಇದರಲ್ಲಿ 3,083 ಮಂದಿ ಮೃತಪಟ್ಟಿದ್ದು, 9 ಸಾವಿರ ಸಕ್ರಿಯ ಪ್ರಕರಣಗಳಿವೆ.

ತಮಿಳುನಾಡಿನಲ್ಲಿ ಇಂದು 1,912 ಮಂದಿಗೆ ಸೋಂಕು ತಗುಲಿದ್ದು, 2,494 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 7.56 ಲಕ್ಷಕ್ಕೆ ಏರಿಕೆಯಾಗಿದ್ದು, 17,154 ಸಕ್ರಿಯ ಪ್ರಕರಣಗಳು ಇವೆ. 11,466 ಮಂದಿ ಮೃತಪಟ್ಟಿದ್ದಾರೆ..

ADVERTISEMENT

ಕೇರಳದಲ್ಲಿ6,357ಹೊಸ ಪ್ರಕರಣಗಳು ವರದಿಯಾಗಿದ್ದು, 6,793 ಮಂದಿ ಗುಣಮುಖರಾಗಿದ್ದಾರೆ. ಗುಜರಾತ್‌ನಲ್ಲಿ 1,124, ಆಂಧ್ರ ಪ್ರದೇಶದಲ್ಲಿ 1,657, ತ್ರಿಪುರದಲ್ಲಿ 78 ಪ್ರಕರಣಗಳು ದಾಖಲಾಗಿವೆ.

ಕರ್ನಾಟದಲ್ಲಿ 2,154 ಹೊಸ ಪ್ರಕರಣ
ಕರ್ನಾಟದಲ್ಲಿ ಇಂದು ಹೊಸದಾಗಿ ಒಟ್ಟು 2,154 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 8,60,082ಕ್ಕೆ ಏರಿಕೆಯಾಗಿದೆ. ಇದರಲ್ಲಿ ಗುಣಮುಖರಾದವರ ಸಂಖ್ಯೆ 8,20,590.

ಇಂದು 17 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 11,508ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.