ADVERTISEMENT

Covid-19 India Update: ದೇಶದಾದ್ಯಂತ ಶನಿವಾರ 2,411 ಕೊರೊನಾ ಪ್ರಕರಣ, 71 ಸಾವು

ಏಜೆನ್ಸೀಸ್
Published 2 ಮೇ 2020, 14:42 IST
Last Updated 2 ಮೇ 2020, 14:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿರುವ 37,776 ಜನರಲ್ಲಿ 10,000ಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರತಿಳಿಸಿದೆ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 2,411 ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿದ್ದು, 71 ಸಾವು ಸಂಭವಿಸಿದೆ.

ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಸೋಂಕಿತರ ಸಂಖ್ಯೆ 37,776ಕ್ಕೆ ಏರಿಕೆಯಾಗಿದೆ. ಈ ಪೈಕಿ 1,223 ಜನ ಮೃತಪಟ್ಟಿದ್ದಾರೆ. 26,535 ಮಂದಿ ವಿವಿಧ ರಾಜ್ಯಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 10,018 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ADVERTISEMENT

ಮಹಾರಾಷ್ಟ್ರದಲ್ಲಿ ಈವರೆಗೆ ಅತಿಹೆಚ್ಚು ಪ್ರಕರಣಗಳು ದಾಖಲಾಗಿದ್ದು, 11,506 ಪ್ರಕರಣಗಳ ಪೈಕಿ 485 ಮಂದಿ ಮೃತಪಟ್ಟಿದ್ದಾರೆ. 1,879 ಜನರು ಗುಣಮುಖರಾಗಿದ್ದಾರೆ. ಗುಜರಾತಿನಲ್ಲಿ 4,721 ಪ್ರಕರಣಗಳ ಪೈಕಿ 236 ಜನ ಸಾವಿಗೀಡಾಗಿದ್ದಾರೆ. 735 ಜನರು ಗುಣಮುಖರಾಗಿದ್ದಾರೆ.

ದೆಹಲಿಯಲ್ಲಿ 3,738, ಮಧ್ಯಪ್ರದೇಶದಲ್ಲಿ 2,719 ಜನರು ಈವರೆಗೆ ಕೊರೊನಾ ವೈರಸ್ ಸೋಂಕು ಪೀಡಿತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.