ADVERTISEMENT

Covid-19 India Update: 1.45 ಲಕ್ಷ ಹೊಸ ಕೋವಿಡ್ ಪ್ರಕರಣ, 794 ಸಾವು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 4:30 IST
Last Updated 10 ಏಪ್ರಿಲ್ 2021, 4:30 IST
ಸಾಂದರ್ಭಿಕ ಚಿತ್ರ (ಎಎಫ್‌ಪಿ)
ಸಾಂದರ್ಭಿಕ ಚಿತ್ರ (ಎಎಫ್‌ಪಿ)   

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 1,45,384 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 794 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 10,46,631 ತಲುಪಿದೆ.

ಈವರೆಗೆ ಒಟ್ಟು 1.32 ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, 1.19 ಕೋಟಿಗೂ ಹೆಚ್ಚು ಸೋಂಕಿತರು ಚೇತರಿಸಿಕೊಂಡಿದ್ದಾರೆ. ಒಟ್ಟು 1,68,436 ಮಂದಿ ಅಸುನೀಗಿದ್ದಾರೆ.

ADVERTISEMENT

ಒಟ್ಟು 9.80 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

ಈವರೆಗೆ 25 ಕೋಟಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 11,73,219 ಮಾದರಿಗಳನ್ನು ಶುಕ್ರವಾರ ಪರೀಕ್ಷೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.