ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 43,846 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಟ್ಟಾರೆಯಾಗಿ ಭಾರತದಲ್ಲಿ ಕೋವಿಡ್ ಎರಡನೇ ಅಲೆ ಬೀಸುವ ಆತಂಕ ಮೂಡಿದ್ದು, ಕಳೆದ ಮೂರು ದಿನಗಳಲ್ಲೇ ಒಂದು ಲಕ್ಷಕ್ಕೂ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿವೆ.
ಅದೇ ಹೊತ್ತಿಗೆ 188 ಸೋಂಕಿತರು ಮೃತಪಟ್ಟಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 1,15,99,130 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,59,755 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ1,11,30,288 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 3,09,087 ಸಕ್ರಿಯ ಪ್ರಕರಣಗಳಿವೆ.
ಇದನ್ನೂ ಓದಿ:ಕೋವಿಡ್–19: ಎರಡನೇ ಅಲೆ ಮತ್ತಷ್ಟು ಗಂಭೀರ
ಈವರೆಗೆ 4. 40 (4,46,03,841) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಪಂಜಾಬ್‌ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಾಗುತ್ತಿಲ್ಲ.
ಮಧ್ಯಪ್ರದೇಶದ ಇಂದೋರ್ ಹಾಗೂ ಭೋಪಾಲದಲ್ಲಿ ಭಾನುವಾರದಂದು ಲಾಕ್‌ಡೌನ್ ಘೋಷಣೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.