ADVERTISEMENT

Covid-19 India Update: ಕೋವಿಡ್ ಸಕ್ರಿಯ ಪ್ರಕರಣಗಳ ಪ್ರಮಾಣ ವರ್ಷದಲ್ಲೇ ಕನಿಷ್ಠ

ಡೆಕ್ಕನ್ ಹೆರಾಲ್ಡ್
Published 24 ಆಗಸ್ಟ್ 2021, 4:57 IST
Last Updated 24 ಆಗಸ್ಟ್ 2021, 4:57 IST
ಬೆಂಗಳೂರಿನ ಮಲ್ಲೇಶ್ವರದಲ್ಲಿ ಕೋವಿಡ್ ಲಸಿಕೆ ನೀಡಿಕೆ – ಪ್ರಜಾವಾಣಿ ಚಿತ್ರ
ಬೆಂಗಳೂರಿನ ಮಲ್ಲೇಶ್ವರದಲ್ಲಿ ಕೋವಿಡ್ ಲಸಿಕೆ ನೀಡಿಕೆ – ಪ್ರಜಾವಾಣಿ ಚಿತ್ರ   

ನವದೆಹಲಿ: ದೇಶದಲ್ಲಿ ಕೋವಿಡ್–19 ಸಕ್ರಿಯ ಪ್ರಕರಣಗಳ ಪ್ರಮಾಣವು ಮಂಗಳವಾರ ಬೆಳಿಗ್ಗೆ ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಪ್ರಮಾಣವು ಒಟ್ಟು ಪ್ರಕರಣಗಳ ಶೇ 0.98ರಷ್ಟಿದೆ. ಇದು ಇಷ್ಟು ಕಡಿಮೆಯಾಗಿರುವುದು 2020ರ ಮಾರ್ಚ್‌ ನಂತರ ಇದೇ ಮೊದಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಸದ್ಯ ದೇಶದಲ್ಲಿ 3,19,551 ಸಕ್ರಿಯ ಪ್ರಕರಣಗಳಿದ್ದು, ಇದು ಕಳೆದ 156 ದಿನಗಳಲ್ಲೇ ಅತಿ ಕಡಿಮೆಯಾಗಿದೆ.

ADVERTISEMENT

ಮಂಗಳವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ದೇಶದಾದ್ಯಂತ 25,467 ಹೊಸ ಪ್ರಕರಣಗಳು ದೃಢಪಟ್ಟಿವೆ. 354 ಸೋಂಕಿತರು ಮೃತಪಟ್ಟಿದ್ದಾರೆ. 39,486 ಮಂದಿ ಗುಣಮುಖರಾಗಿದ್ದಾರೆ.

ಇದರೊಂದಿಗೆ, ದೇಶದಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 3,24,74,773ಕ್ಕೆ ಏರಿಕೆಯಾಗಿದೆ. 4,35,110 ಮಂದಿ ಸಾವಿಗೀಡಾಗಿದ್ದಾರೆ. 3,17,20,112 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಈವರೆಗೆ 58,89,97,805 ಡೋಸ್ ಲಸಿಕೆ ನೀಡಲಾಗಿದೆ. ಸೋಮವಾರ ಒಂದೇ ದಿನ 63,85,298 ಡೋಸ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.