ADVERTISEMENT

Covid-19 India Update: 1.31 ಲಕ್ಷ ಹೊಸ ಪ್ರಕರಣ, 780 ಸಾವು

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 5:08 IST
Last Updated 9 ಏಪ್ರಿಲ್ 2021, 5:08 IST
ನವೀ ಮುಂಬೈನ ರೈಲು ನಿಲ್ದಾಣದಲ್ಲಿ ಆರ್‌ಟಿ–ಪಿಸಿಆರ್‌ ಪರೀಕ್ಷೆಗೆ ಮಾದರಿ ಸಂಗ್ರಹಿಸುತ್ತಿರುವುದು – ಪಿಟಿಐ ಚಿತ್ರ
ನವೀ ಮುಂಬೈನ ರೈಲು ನಿಲ್ದಾಣದಲ್ಲಿ ಆರ್‌ಟಿ–ಪಿಸಿಆರ್‌ ಪರೀಕ್ಷೆಗೆ ಮಾದರಿ ಸಂಗ್ರಹಿಸುತ್ತಿರುವುದು – ಪಿಟಿಐ ಚಿತ್ರ   

ನವದೆಹಲಿ: ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ದಿನವೊಂದರ ಗರಿಷ್ಠ, 1,31,968 ಕೋವಿಡ್ ಪ್ರಕರಣಗಳು ವರದಿಯಾಗಿವೆ. 780 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಈವರೆಗೆ ಸೋಂಕಿತರಾದವರ ಸಂಖ್ಯೆ 1.3 ಕೋಟಿ ದಾಟಿದ್ದು, 1,67,642 ಮಂದಿ ಮೃತಪಟ್ಟಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ. ಸದ್ಯ ದೇಶದಲ್ಲಿ 9,79,608 ಸಕ್ರಿಯ ಪ್ರಕರಣಗಳಿವೆ. ಇದು ಒಟ್ಟು ಸೋಂಕಿನ ಶೇ 7.04ರಷ್ಟಾಗಿದೆ. ಚೇತರಿಕೆ ಪ್ರಮಾಣ ಶೇ 91.67ಕ್ಕೆ ಇಳಿಕೆಯಾಗಿದೆ. ಈವರೆಗೆ 1.19 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ.

ADVERTISEMENT

ದೇಶದಲ್ಲಿ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಸಭೆ ನಡೆಸಿದ್ದಾರೆ. ಏಪ್ರಿಲ್‌ 11ರಿಂದ 14ರ ವರೆಗೂ 'ಲಸಿಕೆ ಉತ್ಸವ' ನಡೆಸುವಂತೆಯೂ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.