ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1,993 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 73 ಸಾವು ಸಂಭವಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೇಂದ್ರ ಕುಟುಂಬ ಮತ್ತು ಕಲ್ಯಾಣ ಇಲಾಖೆಯ ವೆಬ್‌ಸೈಟ್ ಮಾಹಿತಿ ಪ್ರಕಾರ ಸೋಂಕು ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆ 35,365 ಆಗಿದೆ.
ಕೋವಿಡ್ -19 ನಿಂದ ಚೇತರಿಸಿಕೊಂಡ ಪ್ರಮಾಣ ಶೇ 25.37ರಷ್ಟಿದೆ. ಸಿಎಪಿಎಫ್ ಆಸ್ಪತ್ರೆಯಲ್ಲಿ ಕೋವಿಡ್-19 ರೋಗಿಗಳಿಗಾಗಿ 1,900 ಹಾಸಿಗೆಗಳಿವೆ ಎಂದು ಸಚಿವಾಲಯ ತಿಳಿಸಿದೆ.
ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಇಲ್ಲಿಯವರೆಗೆ 9065 ಮಂದಿ ಚೇತರಿಸಿಕೊಂಡಿದ್ದು, ಸಾವಿನ ಸಂಖ್ಯೆ 1152 ಆಗಿದೆ.
ಗುಜರಾತಿನಲ್ಲಿ 24 ಗಂಟೆಗಳಲ್ಲಿ ಹೊಸತಾಗಿ 326 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4721 ಆಗಿದೆ. ಇದರಲ್ಲಿ 736 ಮಂದಿ ಚೇತರಿಸಿಕೊಂಡಿದ್ದು 236 ಮಂದಿ ಸಾವಿಗೀಡಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.
ಕರ್ನಾಟಕದಲ್ಲಿ 589 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 22 ಮಂದಿ ಸಾವಿಗೀಡಾಗಿದ್ದಾರೆ, 251 ಮಂದಿ ಗುಣಮುಖರಾಗಿದ್ದಾರೆ.
ಕೇರಳದಲ್ಲಿ ಇವತ್ತು ಯಾವುದೇ ಪ್ರಕರಣ ವರದಿಯಾಗಿಲ್ಲ. ಗುರುವಾರದವರೆಗೆ ಸೋಂಕು ದೃಢಪಟ್ಟು ಚಿಕಿತ್ಸೆಯಲ್ಲಿರುವವ ಸಂಖ್ಯೆ 111 ಆಗಿದೆ. ಪ್ರಸ್ತುತ ಸೋಂಕು ದೃಢಪಟ್ಟಿರುವ 102 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಪ್ರಕರಣಗಳು ದಾಖಲಾಗಿದ್ದು, 10,498 ಪ್ರಕರಣಗಳ ಪೈಕಿ 459 ಮಂದಿ ಮೃತಪಟ್ಟಿದ್ದಾರೆ.
ಗುಜರಾತ್‌ನಲ್ಲಿ 214, ಮಧ್ಯಪ್ರದೇಶದಲ್ಲಿ 137, ದೆಹಲಿಯಲ್ಲಿ 59, ರಾಜಸ್ಥಾನದಲ್ಲಿ 58, ಉತ್ತರ ಪ್ರದೇಶದಲ್ಲಿ 39 ಮತ್ತು ಆಂಧ್ರ ಪ್ರದೇಶದಲ್ಲಿ 31 ಮಂದಿ ಕೊರೊನಾ ಸೋಂಕಿನಿಂದ ಈವರೆಗೆ ಸಾವಿಗೀಡಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.