ADVERTISEMENT

Covid-19 India update: 8,318 ಕೋವಿಡ್ ಪ್ರಕರಣ ದೃಢ, 465 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ನವೆಂಬರ್ 2021, 4:38 IST
Last Updated 27 ನವೆಂಬರ್ 2021, 4:38 IST
ಸಾಂದರ್ಭಿಕ ಚಿತ್ರ (ಕೃಪೆ– ಪಿಟಿಐ)
ಸಾಂದರ್ಭಿಕ ಚಿತ್ರ (ಕೃಪೆ– ಪಿಟಿಐ)   

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 8,318 ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, 465 ಮಂದಿ ಮೃತಪಟ್ಟಿದ್ದಾರೆ.

10,967 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ, ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 3,39,88,797 ತಲುಪಿದೆ. ಒಟ್ಟು 4,67,933 ಮಂದಿ ಸೋಂಕಿತರು ಅಸುನೀಗಿದ್ದಾರೆ ಎಂಬುದು ಆರೋಗ್ಯ ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.

ಸದ್ಯ ದೇಶದಲ್ಲಿ 1,07,019 ಸಕ್ರಿಯ ಪ್ರಕರಣಗಳಿವೆ. ಈವರೆಗೆ ದೇಶದಾದ್ಯಂತ 63.82 ಕೋಟಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ. 121.06 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಈ ಮಧ್ಯೆ, ದೇಶದಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿ ಮತ್ತು ಲಸಿಕಾ ಅಭಿಯಾನದ ಬಗ್ಗೆ ಅವಲೋಕನ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಬೆಳಿಗ್ಗೆ 10.30ಕ್ಕೆ ಸಭೆ ನಡೆಸಲಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.