ADVERTISEMENT

Covid-19 India Update: 38,667 ಪ್ರಕರಣ ದೃಢ, 478 ಸಾವು

ಪಿಟಿಐ
Published 14 ಆಗಸ್ಟ್ 2021, 4:35 IST
Last Updated 14 ಆಗಸ್ಟ್ 2021, 4:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 38,667 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 35,743 ಸೋಂಕಿತರು ಗುಣಮುಖರಾಗಿದ್ದು, 478 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗೆ ಸೋಂಕಿತರಾದವರ ಸಂಖ್ಯೆ 3,21,56,493 ತಲುಪಿದ್ದು, ಸಾವಿನ ಸಂಖ್ಯೆ 4,30,732ಕ್ಕೆ ಏರಿಕೆಯಾಗಿದೆ.

ಸದ್ಯ ದೇಶದಲ್ಲಿ 3,87,673 ಸಕ್ರಿಯ ಪ್ರಕರಣಗಳಿದ್ದು, ಇದು ಒಟ್ಟು ಪ್ರಕರಣಗಳ ಶೇ 1.21ರಷ್ಟಾಗಿದೆ. ಚೇತರಿಕೆ ಪ್ರಮಾಣ ಶೇ 97.45ರಷ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.