ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 40,120 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 585 ಸೊಂಕಿತರು ಮೃತಪಟ್ಟಿದ್ದಾರೆ. 42,295 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,21,17,826ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 4,30,254 ತಲುಪಿದೆ. ಈವರೆಗೆ 3,13,02,345 ಸೋಂಕಿತರು ಗುಣಮುಖರಾಗಿದ್ದಾರೆ.
ಓದಿ:ಕೇರಳದಲ್ಲಿ 21,445 ಹೊಸ ಪ್ರಕರಣಗಳು; ಸೋಂಕು ದೃಢ ಪ್ರಮಾಣ ಶೇ 14.73
ಸದ್ಯ ದೇಶದಲ್ಲಿ 3,85,227 ಸಕ್ರಿಯ ಪ್ರಕರಣಗಳಿದ್ದು, ಇದು ಒಟ್ಟು ಪ್ರಕರಣಗಳ ಶೇ 1.20ರಷ್ಟಾಗಿದೆ. ಚೇತರಿಕೆ ಪ್ರಮಾಣ ಶೇ 97.46ರಷ್ಟಿದೆ.
ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 2.04ರಷ್ಟಿದ್ದು, ವಾರದ ಪಾಸಿಟಿವಿಟಿ ಪ್ರಮಾಣ ಶೇ 2.13ರಷ್ಟಿದೆ.
ಈವರೆಗೆ 52.95 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.