ADVERTISEMENT

Covid-19 India Update: 1.32 ಲಕ್ಷ ಪ್ರಕರಣ, 3,207 ಸಾವು

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 4:54 IST
Last Updated 2 ಜೂನ್ 2021, 4:54 IST
ಸಾಂದರ್ಭಿಕ ಚಿತ್ರ (ಎಎಫ್‌ಪಿ)
ಸಾಂದರ್ಭಿಕ ಚಿತ್ರ (ಎಎಫ್‌ಪಿ)   

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 1,32,788 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 3,207 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಈವರೆಗೆ ಒಟ್ಟು 2,83,07,832 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, 3,35,102 ಮಂದಿ ಅಸುನೀಗಿದ್ದಾರೆ. 2,61,79,085 ಮಂದಿ ಗುಣಮುಖರಾಗಿದ್ದಾರೆ.

ಸದ್ಯ ದೇಶದಲ್ಲಿ 17,93,645 ಸಕ್ರಿಯ ಪ್ರಕರಣಗಳಿವೆ.

ಈವರೆಗೆ ಒಟ್ಟು 21,85,46,667 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಜೂನ್ 1ರ ವರೆಗೆ ದೇಶದಲ್ಲಿ ಒಟ್ಟು 35,00,57,330 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ ಮಂಗಳವಾರ 20,19,773 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.