ನವದೆಹಲಿ: ದೇಶದಾದ್ಯಂತ ಶನಿವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 44,111 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 738 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
50 ಸಾವಿರಕ್ಕಿಂತ ಕಡಿಮೆ ಪ್ರಕರಣ ವರದಿಯಾಗುತ್ತಿರುವುದು ಇದು ಸತತ ಆರನೇ ದಿನವಾಗಿದೆ.
ದೇಶದಲ್ಲಿ ಈವರೆಗೆ 4,01,050 ಸಾವು ಸಂಭವಿಸಿದೆ. ಇದರೊಂದಿಗೆ ಅತಿಹೆಚ್ಚು ಸಾವು ಸಂಭವಿಸಿದ ದೇಶಗಳ ಪಟ್ಟಿಯಲ್ಲಿ ಅಮೆರಿಕ, ಬ್ರೆಜಿಲ್ ನಂತರದ ಸ್ಥಾನದಲ್ಲಿ ಭಾರತ ಇದೆ.
ಈವರೆಗೆ 3,05,02,362 ಮಂದಿ ಸೋಂಕಿತರಾಗಿದ್ದು, 2,96,05,779 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, 4,95,533ಕ್ಕೆ ತಲುಪಿದೆ.
ದೇಶದಾದ್ಯಂತ ಒಟ್ಟು 34,46,11,291 ಡೋಸ್ ಲಸಿಕೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.