ADVERTISEMENT

Covid-19 India Update: 41,649 ಪ್ರಕರಣ, 593 ಸಾವು

ಡೆಕ್ಕನ್ ಹೆರಾಲ್ಡ್
Published 31 ಜುಲೈ 2021, 4:52 IST
Last Updated 31 ಜುಲೈ 2021, 4:52 IST
ಸಾಂದರ್ಭಿಕ ಚಿತ್ರ (ಪಿಟಿಐ)
ಸಾಂದರ್ಭಿಕ ಚಿತ್ರ (ಪಿಟಿಐ)   

ನವದೆಹಲಿ: ದೇಶದಾದ್ಯಂತ ಶನಿವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 41,649 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 593 ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ಈವರೆಗೆ ಸೋಂಕಿತರಾದವರ ಸಂಖ್ಯೆ 3,16,13,993ಕ್ಕೆ ಏರಿಕೆಯಾಗಿದ್ದು, 4,23,810 ಮಂದಿ ಅಸುನೀಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಸದ್ಯ 4,08,920 ಸಕ್ರಿಯ ಪ್ರಕರಣಗಳಿದ್ದು, ಇದು ಒಟ್ಟು ಪ್ರಕರಣಗಳ ಶೇ 1.29ರಷ್ಟಾಗಿದೆ. ಒಟ್ಟು 3,07,81,263 ಸೋಂಕಿತರು ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ 97.37ರಷ್ಟಿದೆ.

ADVERTISEMENT

ದೈನಂದಿನ ಪಾಸಿಟಿವಿಟಿ ದರ ಶೇ 2.34ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 2.42ರಷ್ಟಿದೆ.

ಈವರೆಗೆ 46.15 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.