ADVERTISEMENT

Covid-19 India Update: 1.20 ಲಕ್ಷ ಹೊಸ ಪ್ರಕರಣ, 3,380 ಸಾವು

​ಪ್ರಜಾವಾಣಿ ವಾರ್ತೆ
Published 5 ಜೂನ್ 2021, 5:26 IST
Last Updated 5 ಜೂನ್ 2021, 5:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಶನಿವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 1,20,529 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 3,380 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೈನಂದಿನ ಹೊಸ ಪ್ರಕರಣಗಳು ಕಳೆದ 58 ದಿನಗಳಲ್ಲಿ ಇದುವೇ ಅತಿ ಕಡಿಮೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 2,86,94,879 ಆಗಿದ್ದು, 3,44,082 ಮಂದಿ ಮೃತಪಟ್ಟಿದ್ದಾರೆ. 2,67,95,549 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಸದ್ಯ 15,55,248 ಸಕ್ರಿಯ ಪ್ರಕರಣಗಳಿವೆ. ಈವರೆಗೆ 22,78,60,317 ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.