ADVERTISEMENT

Covid-19 India Update| 30 ಲಕ್ಷ ಸಮೀಪಿಸಿದ ಸೋಂಕು ಪ್ರಕರಣಗಳು, ಸಾವು 55,794

ಏಜೆನ್ಸೀಸ್
Published 22 ಆಗಸ್ಟ್ 2020, 4:44 IST
Last Updated 22 ಆಗಸ್ಟ್ 2020, 4:44 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ದೆಹಲಿ: ಕಳೆದ 24 ಗಂಟೆಗಳಲ್ಲಿ 69,878 ಕೋವಿಡ್‌–19 ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ. ಇದೇ ಹೊತ್ತಲ್ಲೇ 945 ಮಂದಿ ಕೊರೊನಾ ವೈರಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದ ಒಟ್ಟಾರೆ ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ 30 ಲಕ್ಷದ (29,75,702) ಸನಿಹಕ್ಕೆ ಬಂದು ನಿಂತಿದೆ. ಈ ಪೈಕಿ ಸಕ್ರಿಯವಾಗಿರುವುದು 6,97,330 ಪ್ರಕರಣಗಳು ಮಾತ್ರ. ಇನ್ನುಳಿದಂತೆ 22,22,578 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಇನ್ನು ಕೋವಿಡ್‌–19ನಿಂದಾಗಿ ದೇಶದಲ್ಲಿ ಸತ್ತವರ ಸಂಖ್ಯೆ 55,794ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ADVERTISEMENT

ದೇಶದಲ್ಲಿ ಈ ವರೆಗೆ 3,44,91,073 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಶುಕ್ರವಾರ ಒಂದೇ ದಿನ 10,23,836 ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.