ADVERTISEMENT

Covid-19 India Update: ಕೇರಳ, ಕರ್ನಾಟಕ, ಮಹಾರಾಷ್ಟ್ರದಲ್ಲೇ ಹೆಚ್ಚು ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 16:47 IST
Last Updated 6 ಅಕ್ಟೋಬರ್ 2020, 16:47 IST
ಸೋಂಕು ಪತ್ತೆ ಪರೀಕ್ಷೆ–ಸಾಂದರ್ಭಿಕ ಚಿತ್ರ
ಸೋಂಕು ಪತ್ತೆ ಪರೀಕ್ಷೆ–ಸಾಂದರ್ಭಿಕ ಚಿತ್ರ   

ಬೆಂಗಳೂರು: ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇರಳದಲ್ಲಿ ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಮೂರು ರಾಜ್ಯಗಳಿಂದಲೇ ಕೋವಿಡ್‌ ಪ್ರಕರಣಗಳು 30 ಸಾವಿರ ಸಮೀಪಿಸಿದೆ.

ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ 111 ಮಂದಿ ಆರೋಗ್ಯ ಕಾರ್ಯಕರ್ತರು ಸೇರಿದಂತೆ 7,871 ಮಂದಿಗೆ ಕೊರೊನಾ ವೈರಸ್‌ ಸೊಂಕು ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,981 ಮಂದಿ ಗುಣಮುಖರಾಗಿದ್ದು, 25 ಮಂದಿ ಸಾವಿಗೀಡಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಮಂಗಳವಾರ 12,258 ಹೊಸ ಪ್ರಕರಣಗಳು ದಾಖಲಾದರೆ, 17,141 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 2,47,023 ಸಕ್ರಿಯ ಪ್ರಕರಣಗಳಿವೆ. ಇನ್ನೂ ಕರ್ನಾಟಕದಲ್ಲಿ 9,993 ಹೊಸ ಪ್ರಕರಣಗಳು ದಾಖಲಾಗಿವೆ.

ADVERTISEMENT

ಆಂಧ್ರ ಪ್ರದೇಶದಲ್ಲಿ 5,795 ಪ್ರಕರಣಗಳು, ತಮಿಳು ನಾಡಿನಲ್ಲಿ 5,017, ದೆಹಲಿಯಲ್ಲಿ 2,676 ಕೋವಿಡ್‌ ದೃಢಪಟ್ಟ ಪ್ರಕರಣಗಳು ದಾಖಲಾಗಿವೆ.

ಬೆಳಗ್ಗಿನವರೆಗೂ ಕಳೆದ 24 ಗಂಟೆಗಳಲ್ಲಿ ವರದಿಯಾಗಿರುವ 61,267 ಪ್ರಕರಣಗಳೂ ಸೇರಿದಂತೆ ದೇಶದ ಒಟ್ಟಾರೆ ಕೋವಿಡ್‌ ಪ್ರಕರಣಗಳ ಸಂಖ್ಯೆ 66,85,083ಕ್ಕೆ ಏರಿಕೆಯಾಗಿದೆ.

ಇದೇ ಅವಧಿಯಲ್ಲಿ 884 ಮಂದಿ ಕೋವಿಡ್‌ನಿಂದ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೊನಾ ವೈರಸ್‌ಗೆ ಈ ವರೆಗೆ 1,03,569 ಮಂದಿ ಪ್ರಾಣ ತೆತ್ತಂತಾಗಿದೆ.

ಸದ್ಯ ದೇಶದಲ್ಲಿ 9,19,023 ಸಕ್ರಿಯ ಪ್ರಕರಣಗಳಿವೆ. ಇನ್ನುಳಿದಂತೆ 56,62,491 ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಈ ವರೆಗೆ 8,10,71,797 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 10,89,403 ಮಾದರಿಗಳನ್ನು ಕಳೆದ 24 ಗಂಟೆಗಳಲ್ಲಿ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್‌) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.