ADVERTISEMENT

Covid-19 India Update: 2ನೇ ಹಂತದ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ

ಏಜೆನ್ಸೀಸ್
Published 1 ಮಾರ್ಚ್ 2021, 5:26 IST
Last Updated 1 ಮಾರ್ಚ್ 2021, 5:26 IST
ಕೋವಿಡ್-19 ಲಸಿಕೆ ಹಾಕಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ
ಕೋವಿಡ್-19 ಲಸಿಕೆ ಹಾಕಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ದೇಶದಲ್ಲಿ ಎರಡನೇ ಹಂತದ ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಸೋಮವಾರ ಚಾಲನೆ ದೊರಕಿದೆ. ಸೋಮವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಹಾಸಿಕೊಂಡರು.

ಭಾರತೀಯ ವೈದ್ಯಕೀಯ ಪರಿಷತ್ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದ್‌ನ ಭಾರತ್ ಬಯೋಟೆಕ್ ದೇಶೀಯವಾಗಿ ಅಭಿವೃದ್ಧಿಪಡಿಸಿದ ಕೋವ್ಯಾಕ್ಸಿನ್ ಲಸಿಕೆಯನ್ನು ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಎರಡನೇ ಹಂತದ ಕೋವಿಡ್ ಲಸಿಕೆ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು.

ಈ ನಡುವೆ ದೇಶದಲ್ಲಿ ಹೊಸದಾಗಿ 15,510 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 24 ತಾಸಿನಲ್ಲಿ 106 ಮಂದಿ ಮೃತಪಟ್ಟಿದ್ದು, ಕೊರೊನಾ ವೈರಸ್ ಒಟ್ಟು ಸಾವಿನ ಸಂಖ್ಯೆ 1,57,157ಕ್ಕೆ ತಲುಪಿದೆ.

ಭಾರತದಲ್ಲಿ 1,68,627 ಕೋವಿಡ್-19 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ 1,07,86,457 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

ಅಂದ ಹಾಗೆ ದೇಶದಲ್ಲಿ ಕೊರೊನಾ ವೈರಸ್ ಒಟ್ಟು ಪ್ರಕರಣಗಳ ಸಂಖ್ಯೆ 1,10,96,731ಕ್ಕೆ ತಲುಪಿದೆ.

ಏತನ್ಮಧ್ಯೆ ದೇಶದಲ್ಲಿ ಇದುವರೆಗೆ 1,43,01,266 ಮಂದಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಕೋವಿಡ್-19 ಅಂಕಿಅಂಶ:
ಒಟ್ಟು ಪ್ರಕರಣ: 1,10,96,731
ಗುಣಮುಖ: 1,07,86,457
ಮೃತರ ಸಂಖ್ಯೆ: 1,57,157
ಸಕ್ರಿಯ ಪ್ರಕರಣ: 1,68,627

ಒಟ್ಟು ಕೋವಿಡ್-19 ಲಸಿಕೆ ವಿತರಣೆ: 1,43,01,266

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.