ADVERTISEMENT

Covid-19 India Update | ಅತಿಹೆಚ್ಚು ಸೋಂಕು ಪ್ರಕರಣ: 2ನೇ ಸ್ಥಾನಕ್ಕೇರಿದ ಭಾರತ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 6:25 IST
Last Updated 7 ಸೆಪ್ಟೆಂಬರ್ 2020, 6:25 IST
   

ನವದೆಹಲಿ:ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 90,802 ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ42,04,614 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇದರೊಂದಿಗೆ ಭಾರತವು ಹೆಚ್ಚು ಸೋಂಕು ಪ್ರಕರಣಗಳು ವರದಿಯಾದ ರಾಷ್ಟ್ರಗಳ ಸಾಲಿನಲ್ಲಿ ಎರಡನೇ ಸ್ಥಾನಕ್ಕೇರಿದೆ.

ಇಲಾಖೆಯ ಮಾಹಿತಿ ಪ್ರಕಾರ ಭಾನುವಾರ1,016 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು ಸಾವಿನ ಸಾವಿನ ಸಂಖ್ಯೆ 71,642ಕ್ಕೆ ತಲುಪಿದೆ. ಇದುವರೆಗೆ32,50,429 ಸೋಂಕಿತರು ಗುಣುಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು,8,82,542 ಪ್ರಕರಣಗಳು ಸಕ್ರಿಯವಾಗಿವೆ.

ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಮಾಹಿತಿ ಪ್ರಕಾರ ಅಮೆರಿದಲ್ಲಿ ಈವರೆಗೆ 62,76,421 ಪ್ರಕರಣಗಳು ವರದಿಯಾಗಿದ್ದು, ಹೆಚ್ಚು ಸೋಂಕು ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 1,88,941 ಸೋಂಕಿತರು ಮೃತಪಟ್ಟಿದ್ದು, 23,15,995ಮಂದಿ ಗುಣಮುಖರಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ 41,37,521 ಜನರಿಗೆ ಸೋಂಕು ತಗುಲಿದ್ದು,35,22,155 ಜನರು ಗುಣಮುಖರಾಗಿದ್ದಾರೆ. ಉಳಿದಂತೆ1,26,650ಸೋಂಕಿತರು ಮೃತಪಟ್ಟಿದ್ದಾರೆ.

ADVERTISEMENT

4.95 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ
ಸೆಪ್ಟೆಂಬರ್‌ 6 ರಂದು ದೇಶದಾದ್ಯಂತ 7,20,362 ಜನರಿಗೆ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ. ಇದರೊಂದಿಗೆ ಈವರೆಗೆ ಒಟ್ಟು 4,95,51,507 ಮಂದಿಗೆ ಕೋವಿಡ್–19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.

ಚೇತರಿಕೆ ಪ್ರಮಾಣದಲ್ಲಿ ಏರಿಕೆ
ದೇಶದಾದ್ಯಂತ ಕೋವಿಡ್–19 ಸೋಂಕಿತರ ಚೇತರಿಕೆ ಪ್ರಮಾಣವು ಶೇ.77.31ಕ್ಕೆ ಏರಿಯಾಗಿದೆ. ಸೆಪ್ಟೆಂಬರ್‌ 5ರಂದು ಈ ಪ್ರಮಾಣವು ಶೇ.77.23 ರಷ್ಟಿತ್ತು. ಅದೇ ರೀತಿ ಸಾವಿನ ಪ್ರಮಾಣ ಶೇ.1.73ರಿಂದ ಶೇ.1.70ಗೆ ಇಳಿದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮಹಾರಾಷ್ಟ್ರದಲ್ಲಿ9 ಲಕ್ಷ ದಾಟಿದ ಸೋಂಕಿತರ ಸಂಖ್ಯೆ
ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಇದುವರೆಗೆ9,07,212 ಪ್ರಕರಣಗಳು ವರದಿಯಾಗಿದ್ದು, 6,44,400 ಮಂದಿ ಗುಣಮುಖರಾಗಿದ್ದಾರೆ. 26,604 ಸೋಂಕಿತರುಮೃತಪಟ್ಟಿದ್ದು, ಇನ್ನೂ 2,36,208 ಪ್ರಕರಣಗಳು ಸಕ್ರಿಯವಾಗಿವೆ.

ತಮಿಳುನಾಡಿನಲ್ಲಿ 4,63,480ಜನರಿಗೆಸೋಂಕು ತಗುಲಿದೆ. ಇದುವರೆಗೆ 4,04,186 ಸೋಂಕಿತರು ಗುಣುಮುಖರಾಗಿದ್ದಾರೆ. 7,836 ಮಂದಿ ಸಾವಿಗೀಡಾಗಿದ್ದು, ಇನ್ನೂ 51,458 ಪ್ರಕರಣಗಳು ಸಕ್ರಿಯವಾಗಿವೆ.

ಆಂಧ್ರ ಪ್ರದೇಶದಲ್ಲಿ 4,98,125ಪ್ರಕರಣಗಳು ವರದಿಯಾಗಿವೆ. 3,94,019 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 99,689 ಪ್ರಕರಣಗಳು ಸಕ್ರಿಯವಾಗಿದ್ದು, 4,417 ಮಂದಿ ಸಾವಿಗೀಡಾಗಿದ್ದಾರೆ.ರಾಜಧಾನಿ ದೆಹಲಿಯಲ್ಲಿ 1,91,449ಮಂದಿಗೆಸೋಂಕು ತಗುಲಿದೆ. ಇದರಲ್ಲಿ 1,65,973 ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನೂ 20,909 ಪ್ರಕರಣಗಳು ಸಕ್ರಿಯವಾಗಿದ್ದು, 4,567 ಸೋಂಕಿತರು ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದಲ್ಲಿ 2,66,283 ಮಂದಿಗೆ ಸೋಂಕು ತಗುಲಿದೆ. ಇದರಲ್ಲಿ 2,00,738 ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನೂ 61,625 ಪ್ರಕರಣಗಳು ಸಕ್ರಿಯವಾಗಿದ್ದು, 3,920 ಸೋಂಕಿತರು ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ4 ಲಕ್ಷದತ್ತ ಕೋವಿಡ್ ಸಂಖ್ಯೆ
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರಕರ್ನಾಟಕದಲ್ಲಿ ಸೆಪ್ಟೆಂಬರ್‌ 7ರ ಬೆಳಗ್ಗೆ 8ರ ವರೆಗೆ ಒಟ್ಟು 3,98,551 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ, 2,92,873 ಸೋಂಕಿತರು ಗುಣಮುಖರಾಗಿದ್ದು, ಇನ್ನೂ 99,285 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,393 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.