ನವೆದಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 2,63,533 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 4,329 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,52,28,996 ಕ್ಕೆ ಏರಿಕೆಯಾಗಿದೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 2,78,719 ಮಂದಿ ಸಾವಿಗೀಡಾಗಿದ್ದಾರೆ.
ಸೋಮವಾರ ಒಂದೇ ದಿನ 4,22,436 ಮಂದಿ ಗುಣಮುಖರಾಗಿದ್ದು, ಇದುವರೆಗೆ 2,15,96,512 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ದೇಶದಲ್ಲಿ 33,53,765 ಸಕ್ರಿಯ ಪ್ರಕರಣಗಳಿವೆ.
ಕರ್ನಾಟಕದಲ್ಲಿ 6,03,660, ಮಹಾರಾಷ್ಟ್ರದಲ್ಲಿ 4,48,000, ಕೇರಳದಲ್ಲಿ 3,62,675, ತಮಿಳುನಾಡಿನಲ್ಲಿ 2,31,596, ಆಂಧ್ರಪ್ರದೇಶದಲ್ಲಿ 2,11,554, ರಾಜಸ್ಥಾನದಲ್ಲಿ 1,76,363 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಇದುವರೆಗೆ 31,82,92,881 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.