ADVERTISEMENT

Covid-19 India Update | ಒಂದೇ ದಿನದಲ್ಲಿ 5611 ಹೊಸ ಪ್ರಕರಣ, 140 ಜನ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಮೇ 2020, 4:52 IST
Last Updated 20 ಮೇ 2020, 4:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದಿನದಿಂದ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,611 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 140 ಜನರು ಒಂದೇ ದಿನದಲ್ಲಿ ಮೃತಪಟ್ಟಿದ್ದಾರೆ.

ಭಾರತದಲ್ಲಿ ಇಲ್ಲಿಯವರೆಗೆ1,06,750 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 42,297 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 3,303ಕ್ಕೇರಿದೆ. ಈವರೆಗೂ 61,149 ಸಕ್ರಿಯ ಕೊರೊನಾ ವೈರಸ್ ಸೋಂಕು ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆಯು37,136ಕ್ಕೆ ಏರಿಕೆಯಾಗಿದ್ದು,ಈವರೆಗೆ 1,325ಜನರು ಸಾವಿಗೀಡಾಗಿದ್ದಾರೆ. 9,639 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಮಿಳುನಾಡಿನಲ್ಲಿ 12,448 ಪ್ರಕರಣಗಳು ಪತ್ತೆಯಾಗಿದ್ದು, 4,895 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 84 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಗುಜರಾತ್‌ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12,140ಕ್ಕೆ ಏರಿದ್ದು, ಈವರೆಗೆ 719 ಮಂದಿ ಸಾವಿಗೀಡಾಗಿದ್ದಾರೆ. 5,043 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ದೆಹಲಿಯಲ್ಲಿ ಈವರೆಗೆ ಒಟ್ಟು 10,554 ಕೋವಿಡ್‌-19 ಪ್ರಕರಣಗಳು ದಾಖಲಾಗಿದ್ದು, 168 ಮಂದಿ ಮೃತಪಟ್ಟಿದ್ದರೆ, 4,750 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.