ADVERTISEMENT

Covid-19 India Update | 90 ಸಾವಿರ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ

ಏಜೆನ್ಸೀಸ್
Published 17 ಮೇ 2020, 7:26 IST
Last Updated 17 ಮೇ 2020, 7:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,987 ಹೊಸ ಪ್ರಕರಣಗಳು ಪತ್ತೆಯಾಗಿದ್ದು,ಇಲ್ಲಿಯವರೆಗೆ90,927ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಕೊರೊನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಏರುತ್ತಲೇ ಇದೆ.

ಈವರೆಗೆ ಭಾರತದಲ್ಲಿ 34,108 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸಾವಿನ ಸಂಖ್ಯೆ 2,872ಕ್ಕೇರಿದೆ. ಈವರೆಗೂ 53,946 ಸಕ್ರಿಯ ಕೊರೊನಾ ವೈರಸ್ ಸೋಂಕು ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆಯು30,706ಕ್ಕೆ ಏರಿಕೆಯಾಗಿದ್ದು,ಈವರೆಗೆ 1,135ಜನರು ಸಾವಿಗೀಡಾಗಿದ್ದಾರೆ. ತಮಿಳುನಾಡಿನಲ್ಲಿ 10,585ಪ್ರಕರಣಗಳು ಪತ್ತೆಯಾಗಿದ್ದು, 3,538 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 74 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಗುಜರಾತ್‌ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,988ಕ್ಕೆ ಏರಿದ್ದು, ಈವರೆಗೆ 625 ಮಂದಿ ಸಾವಿಗೀಡಾಗಿದ್ದಾರೆ. 4,308ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ದೆಹಲಿಯಲ್ಲಿ ಈವರೆಗೆ ಒಟ್ಟು 9,333 ಕೋವಿಡ್‌-19 ಪ್ರಕರಣಗಳು ದಾಖಲಾಗಿದ್ದು, 129 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.