ADVERTISEMENT

Covid-19 India Update | 24 ಗಂಟೆಯಲ್ಲಿ 4970 ಪ್ರಕರಣ, ಲಕ್ಷಕ್ಕೇರಿದ ಸೋಂಕಿತರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಮೇ 2020, 4:01 IST
Last Updated 19 ಮೇ 2020, 4:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದ್ದು, ದಿನದಿಂದ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,970 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಮೃತರ ಸಂಖ್ಯೆ 134ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಲ್ಲಿಯವರೆಗೆ1,01,139 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 36,823 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 3,163ಕ್ಕೇರಿದೆ. ಈವರೆಗೂ 58,802 ಸಕ್ರಿಯ ಕೊರೊನಾ ವೈರಸ್ ಸೋಂಕು ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆಯು35,0583ಕ್ಕೆ ಏರಿಕೆಯಾಗಿದ್ದು,ಈವರೆಗೆ 1,249ಜನರು ಸಾವಿಗೀಡಾಗಿದ್ದಾರೆ. 8437 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಮಿಳುನಾಡಿನಲ್ಲಿ 11,760 ಪ್ರಕರಣಗಳು ಪತ್ತೆಯಾಗಿದ್ದು, 4,406 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 81 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಗುಜರಾತ್‌ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,745ಕ್ಕೆ ಏರಿದ್ದು, ಈವರೆಗೆ 694 ಮಂದಿ ಸಾವಿಗೀಡಾಗಿದ್ದಾರೆ. 4,804 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ದೆಹಲಿಯಲ್ಲಿ ಈವರೆಗೆ ಒಟ್ಟು 10,054 ಕೋವಿಡ್‌-19 ಪ್ರಕರಣಗಳು ದಾಖಲಾಗಿದ್ದು, 168 ಮಂದಿ ಮೃತಪಟ್ಟಿದ್ದರೆ, 4,485 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.