ADVERTISEMENT

Covid-19 India Update | ಕಳೆದ 24ಗಂಟೆಯಲ್ಲಿ 5,609 ಹೊಸ ಪ್ರಕರಣ, 132 ಜನ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಮೇ 2020, 4:15 IST
Last Updated 21 ಮೇ 2020, 4:15 IST
   

ನವದೆಹಲಿ: ದೇಶದಲ್ಲಿ ಕೋವಿಡ್‌–19 ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 5,609 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 132 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಟಿಸಿದೆ.

ಇದರೊಂದಿಗೆ ದೇಶದ್ಲಲಿ ಸೋಕಿತರ ಸಂಖ್ಯೆ, 1,12,359ಕ್ಕೆ ಏರಿಕೆಯಾಗಿದೆ. ಈ ಪೈಕಿ 45,299 ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 3,435 ಸೋಂಕಿತರು ಮೃತಪಟ್ಟಿದ್ದಾರೆ. 63,624 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆ39,297ಕ್ಕೆ ಏರಿಕೆಯಾಗಿದ್ದು, ಈವರೆಗೆ 1,390 ಜನರು ಸಾವಿಗೀಡಾಗಿದ್ದಾರೆ. 10,318 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಮಿಳುನಾಡಿನಲ್ಲಿ 13,191 ಪ್ರಕರಣಗಳು ಪತ್ತೆಯಾಗಿದ್ದು, 5,882 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 87 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಗುಜರಾತ್‌ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12,537ಕ್ಕೆ ಏರಿದ್ದು, ಈವರೆಗೆ 749 ಮಂದಿ ಸಾವಿಗೀಡಾಗಿದ್ದಾರೆ. 5,219 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೆಹಲಿಯಲ್ಲಿ ಈವರೆಗೆ ಒಟ್ಟು 11,088 ಕೋವಿಡ್‌-19 ಪ್ರಕರಣಗಳು ದಾಖಲಾಗಿದ್ದು, 176 ಮಂದಿ ಮೃತಪಟ್ಟಿದ್ದಾರೆ. 5,192 ಮಂದಿ ಗುಣಮುಖರಾಗಿದ್ದಾರೆ.

ಕರ್ನಾಟದಲ್ಲಿ ಬುಧವಾರ ಸಂಜೆ 5ರ ವರೆಗೆ ಸೋಂಕಿತರ ಸಂಖ್ಯೆ1,462ಕ್ಕೆ ಏರಿಕೆಯಾಗಿದೆ. ಇದರಲ್ಲಿ 41 ಜನರು ಮೃತಪಟ್ಟಿದ್ದರೆ, 556 ಮಂದಿ ಗುಣಮುಖರಾಗಿದ್ದಾರೆ. 864 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.