ADVERTISEMENT

Covid-19 India Updates: 35 ಸಾವಿರ ಹೊಸ ಪ್ರಕರಣ, ಲಸಿಕೆ ಅಭಿಯಾನ ಚುರುಕು

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 5:38 IST
Last Updated 18 ಮಾರ್ಚ್ 2021, 5:38 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: 24 ಗಂಟೆಗಳಲ್ಲಿ ದೇಶದಾದ್ಯಂತ 35,871 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಈ ಪ್ರಮಾಣ ಕಳೆದ ಡಿಸೆಂಬರ್‌ನಲ್ಲಿ ದಾಖಲಾಗಿತ್ತು.

ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನ ಮತ್ತಷ್ಟು ಚುರುಕುಗೊಂಡಿದೆ.

ಮಹಾರಾಷ್ಟ್ರದಲ್ಲಿ 25 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಕೋವಿಡ್‌ನಿಂದ 172 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬುಧವಾರ ಮಾಹಿತಿ ನೀಡಿದೆ.

ADVERTISEMENT

ದೇಶದಲ್ಲಿ ಈವರೆಗೆ ಒಟ್ಟು 1,14,74,605 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,59,216 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೂ 1,10,63,025 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 2,52,364 ಸಕ್ರಿಯ ಪ್ರಕರಣಗಳಿವೆ. ಈವರೆಗೆ 3. 71 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.