ADVERTISEMENT

Covid-19 India Update: ದೇಶದಲ್ಲಿ 38,353 ಹೊಸ ಪ್ರಕರಣಗಳು ಪತ್ತೆ

ಪಿಟಿಐ
Published 11 ಆಗಸ್ಟ್ 2021, 6:18 IST
Last Updated 11 ಆಗಸ್ಟ್ 2021, 6:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಭಾರತದಲ್ಲಿ ಒಂದೇ ದಿನ 38,353 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆಯು 3,20,36,511 ಕ್ಕೆ ಏರಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ತಿಳಿಸಿದೆ.

‘ಬುಧವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ 497 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಈವರೆಗೆ ಒಟ್ಟು 4,29,179 ಮಂದಿಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ.

ಇದೇ ವೇಳೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯು 3,86,351ಕ್ಕೆ ಇಳಿದಿದ್ದು, ಇದು 140 ದಿನಗಳ ಬಳಿಕ ವರದಿಯಾದ ಅತಿ ಕಡಿಮೆ ಸಂಖ್ಯೆಯ ಸಕ್ರಿಯ ಪ್ರಕರಣವಾಗಿದೆ. ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳು ಶೇಕಡ 1.21 ರಷ್ಟು ಭಾಗವನ್ನು ಹೊಂದಿದೆ. ದೇಶದ ಚೇತರಿಕೆ ಪ್ರಮಾಣವು ಶೇಕಡ 97.45 ರಷ್ಟಿದೆ’ ಎಂದು ಸಚಿವಾಲಯ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.