ADVERTISEMENT

Covid-19 India Update:1,829 ಹೊಸ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಮೇ 2022, 5:05 IST
Last Updated 18 ಮೇ 2022, 5:05 IST
ಐಎಎನ್‌ಎಸ್ ಚಿತ್ರ
ಐಎಎನ್‌ಎಸ್ ಚಿತ್ರ   

ನವದೆಹಲಿ: ದೇಶದಲ್ಲಿ ಕೋವಿಡ್–19 ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ತುಸು ಏರಿಕೆ ಕಂಡಿದೆ. 24 ಗಂಟೆಗಳಲ್ಲಿ 1,829 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 33 ಮಂದಿ ಸಾವಿಗೀಡಾಗಿದ್ದು, ಮೃತರ ಒಟ್ಟು ಸಂಖ್ಯೆ 5,24,293ಕ್ಕೆ ಏರಿದೆ.

ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15,647ರಷ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,27,199 ರಷ್ಟಾಗಿದೆ.

ದೈನಂದಿನ ಪಾಸಿಟಿವಿಟಿ ದರ ಶೇಕಡ 0.42 ರಷ್ಟಿದೆ.

ಈವರೆಗೆ ದೇಶದಲ್ಲಿ 191 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.