ADVERTISEMENT

ಮುಂಬೈ: ಸತತ 2ನೇ ದಿನವೂ 20 ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜನವರಿ 2022, 15:02 IST
Last Updated 7 ಜನವರಿ 2022, 15:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿವೆ. ಶುಕ್ರವಾರ ಸಂಜೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲೇ ಅತಿ ಹೆಚ್ಚು 20,971 ಪ್ರಕರಣಗಳು ವರದಿಯಾಗಿವೆ.

ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 8,74,780ಕ್ಕೆ ಏರಿಕೆಯಾಗಿದೆ. ಈ ಪೈಕಿ ಶೇ 84 ಮಂದಿಯಲ್ಲಿ ರೋಗ ಲಕ್ಷಣ ಕಂಡುಬಂದಿಲ್ಲ ಎಂಬುದು ಗಮನಾರ್ಹವೆನಿಸುತ್ತದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 91,731ಕ್ಕೆ ಏರಿಕೆ ಕಂಡಿವೆ. ಈ ಅವಧಿಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ADVERTISEMENT

8,490 ಮಂದಿ ಗುಣಮುಖರಾಗಿದ್ದಾರೆ. ಹಾಗೆಯೇ ಇಂದು 1,395 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಂಬೈನಲ್ಲಿ ಗುರುವಾರದಂದು 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.

ಮುಂಬೈನಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರಲಾಗುವುದೇ ಎಂಬುದರ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವ ರಾಜೇಶ್ ತೋಪೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.