ADVERTISEMENT

1,595 ಆಮ್ಲಜನಕ ಉತ್ಪಾದನಾ ಘಟಕಗಳಿಗೆ ಚಾಲನೆ: ಕೇಂದ್ರ

ಹಬ್ಬಗಳ ಸಂದರ್ಭದಲ್ಲಿ ಕೋವಿಡ್‌–19 ಪ್ರಕರಣಗಳಲ್ಲಿ ಹೆಚ್ಚಳ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 17:03 IST
Last Updated 16 ಸೆಪ್ಟೆಂಬರ್ 2021, 17:03 IST
ಆಮ್ಲಜನಕ ಘಟಕ (ಪ್ರಾತಿನಿಧಿಕ ಚಿತ್ರ)
ಆಮ್ಲಜನಕ ಘಟಕ (ಪ್ರಾತಿನಿಧಿಕ ಚಿತ್ರ)   

ನವದೆಹಲಿ: ಮುಂದಿನ ದಿನಗಳಲ್ಲಿ ಸಾಲುಸಾಲು ಹಬ್ಬಗಳಿದ್ದು, ಈ ಸಂದರ್ಭದಲ್ಲಿ ಕೊರೊನಾ ಸೋಂಕು ಪ್ರಸರಣ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಕೇಂದ್ರ ಸರ್ಕಾರ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 1,595 ಆಮ್ಲಜನಕ ಉತ್ಪಾದನಾ ಘಟಕಗಳಿಗೆ ಚಾಲನೆ ನೀಡಿದೆ.

ಇನ್ನೂ, 2,000ಕ್ಕೂ ಅಧಿಕ ಇಂಥ ಘಟಕಗಳ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

‘ಪ್ರತಿ ದಿನ 4,600 ಟನ್‌ ಆಮ್ಲಜನಕ ಉತ್ಪಾದಿಸುವ ಗುರಿ ಇದೆ. ಈಗ 1,595 ಆಮ್ಲಜನಕ ಉತ್ಪಾದನಾ ಘಟಕಗಳ (ಪ್ರೆಷರ್‌ ಸ್ವಿಂಗ್‌ ಅಡ್ಸಾರ್ಪ್‌ಷನ್‌ ಪ್ಲಾಂಟ್ಸ್‌) ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇವುಗಳಿಂದ 2,100 ಟನ್‌ನಷ್ಟು ಆಮ್ಲಜನಕ ಉತ್ಪಾದನೆಯಾಗುತ್ತದೆ’ ಎಂದು ಸಚಿವಾಲಯದ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ತಿಳಿಸಿದ್ದಾರೆ.

ADVERTISEMENT

ದೇಶದಲ್ಲಿ ಕೋವಿಡ್‌ನ ಎರಡನೇ ಅಲೆ ಕಾಣಿಸಿಕೊಂಡಾಗ, ಆಮ್ಲಜನಕದ ತೀವ್ರ ಕೊರತೆ ಕಾಣಿಸಿಕೊಂಡಿತ್ತು. ಇದರಿಂದಾಗಿ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಪರದಾಡಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.