ADVERTISEMENT

ಕೋವಿಡ್ ನಿಯಂತ್ರಿಸುವಲ್ಲಿ ವೈಫಲ್ಯ; ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು: ಕಪಿಲ್

ಏಜೆನ್ಸೀಸ್
Published 5 ಮೇ 2021, 10:06 IST
Last Updated 5 ಮೇ 2021, 10:06 IST
   

ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂಪೂರ್ಣ ವೈಫಲ್ಯವನ್ನು ಅನುಭವಿಸಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಆರೋಪಿಸಿದ್ದಾರೆ.

ಮುನ್ನಚ್ಚೆರಿಕೆಗಳನ್ನೆಲ್ಲ ನಿರ್ಲಕ್ಷಿಸಿದ ಕೇಂದ್ರ ಸರ್ಕಾರವು, ರಾಜಕೀಯ ರ‍್ಯಾಲಿ ಹಾಗೂ ಕುಂಭಮೇಳದೊಂದಿಗೆ ಮುಂದುವರಿಯಿತು. ಈ ಮೂಲಕ ಸಾಂಕ್ರಾಮಿಕ ಬಿಕ್ಕಟ್ಟನ್ನು ಎದುರಿಸಲು ಅಸಮರ್ಥ ಎಂಬುದನ್ನು ಜಗತ್ತಿಗೆ ತೋರಿಸಿದೆ ಎಂದುಟೀಕಿಸಿದ್ದಾರೆ.

ಮಾತು ಮುಂದುವರಿಸಿದ ಸಿಬಲ್, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಬೇಡಿಕೆಯಿರಿಸಿದರು.

ADVERTISEMENT

ನಾಲ್ಕು ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು ಹಾಗೂ ಕೇರಳ ಮತ್ತು ಕೇಂದ್ರಡಾಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಯನ್ನು ಏಪ್ರಿಲ್ ತಿಂಗಳಲ್ಲಿ ನಡೆಸಲಾಗಿತ್ತು. ಹರಿದ್ವಾರದಲ್ಲಿ ಕುಂಭಮೇಳವನ್ನು ಆಯೋಜಿಸಲಾಗಿತ್ತು.

ಕೋವಿಡ್-19 ಸಾಂಕ್ರಾಮಿಕ ರೋಗವು ಕೊನೆಗೊಂಡಿದೆ ಎಂದು ಕೇಂದ್ರ ಸರ್ಕಾರ ಭಾವಿಸಿತ್ತು. ಅಲ್ಲಿ ಟೆಸ್ಟಿಂಗ್ ಅಥವಾ ಆಮ್ಲಜನಕ ಕೊರತೆಯ ಬಿಕ್ಕಟ್ಟು ಎದುರಾಗಲಿದೆ ಎಂಬುದನ್ನುಯೋಚಿಸಿಯೇ ಇಲ್ಲ ಎಂದುಕಿಡಿ ಕಾರಿದರು.

ಮಾರ್ಚ್‌ನಲ್ಲಿ ಕೋವಿಡ್-19 ರೂಪಾಂತರವು ಭಾರತದಲ್ಲಿ ಬಹಳ ವೇಗವಾಗಿ ಹರಡಲಿದೆ ಎಂದು ಎಚ್ಚರಿಸಿತ್ತು. ಆದರೆ ಅವುಗಳೆನ್ನೆಲ್ಲ ಸರ್ಕಾರವು ಕಡೆಗಣಿಸಿತ್ತು. ಪ್ರಧಾನಿ ಹಾಗೂ ಕೇಂದ್ರ ಸರ್ಕಾರವು ನಿರ್ಲಕ್ಷ್ಯ ವಹಿಸಿದ ರೀತಿ ನೋಡಿದರೆ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಬಾರದು ಎಂಬುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಪ್ರಧಾನಿ ದೇಶದ ಮುಂದೆ ಬಂದು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೋವಿಡ್-19 ಲಸಿಕೆಗಳ ಬೆಲೆ ನಿಗದಿಪಡಿಸಿರುವ ಮತ್ತು ಜನತೆಗೆ ಕೋವಿಡ್ ಲಸಿಕೆ ನೀಡುವ ಹೊಣೆಯನ್ನು ರಾಜ್ಯ ಸರ್ಕಾರಗಳಿಗೆ ಬಿಟ್ಟಿಕೊಟ್ಟಿರುವುದು ಸಿಬಲ್ ಅಸಮಾಧಾನಕ್ಕೆ ಕಾರಣವಾಯಿತು.

ಕೋವಿಡ್ ಲಸಿಕೆಗಳ ಬೆಲೆ ಕಡಿಮೆ ಮಾಡಲು ಸರ್ಕಾರ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಅಚ್ಚರಿ ಮೂಡಿಸಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಪಡೆಯುವುದನ್ನು ಖಾತ್ರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.