ADVERTISEMENT

ರಾಜಸ್ಥಾನದಲ್ಲಿ ಮಾಸ್ಕ್‌ ಕಡ್ಡಾಯ, ಕಾನೂನು ಜಾರಿ

ಪಿಟಿಐ
Published 2 ನವೆಂಬರ್ 2020, 12:25 IST
Last Updated 2 ನವೆಂಬರ್ 2020, 12:25 IST
ಅಶೋಕ್‌ ಗೆಹ್ಲೋಟ್‌
ಅಶೋಕ್‌ ಗೆಹ್ಲೋಟ್‌   

ಜೈಪುರ: ಕೋವಿಡ್‌ 19 ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ರಾಜಸ್ಥಾನದಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿ, ಕಾನೂನು ಜಾರಿಗೊಳಿಸಿದ ಮೊದಲ ರಾಜ್ಯ ರಾಜಸ್ಥಾನವಾಗಲಿದೆ ಎಂದು ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಸೋಮವಾರ ತಿಳಿಸಿದ್ದಾರೆ.

ಈ ಕಾನೂನು ಸೋಮವಾರದಿಂದ ಜಾರಿಯಾಗಲಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದು, ’ಕೊರೊನಾ ಸೋಂಕಿ‌ನಿಂದ ರಕ್ಷಣೆ ಪಡೆಯಲು ಮಾಸ್ಕೇ ಲಸಿಕೆ' ಎಂದು ಬರೆದುಕೊಂಡಿದ್ದಾರೆ.

ADVERTISEMENT

ಖಾಸಗಿ ಹಾಗೂ ಸರ್ಕಾರಿ ಸಾರಿಗೆ ಬಳಸುವಾಗ ಕಡ್ಡಾಯವಾಗಿ ಮಾಸ್ಕ್‌ ಬಳಸಬೇಕು. ಹಾಗೆಯೇ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಾಗಲೂ ಮಾಸ್ಕ್‌ ಧರಿಸಲೇಬೇಕು ಎಂದು ಕಡ್ಡಾಯಗೊಳಿಸಿರುವ ತಿದ್ದುಪಡಿ ಮಸೂದೆಯನ್ನು ಶನಿವಾರ ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ರಾಜಸ್ಥಾನದಲ್ಲಿ ನ.1ರಂದು ಕೊರೊನಾ ಸೋಂಕಿನಿಂದ 10 ಜನ ಮೃತಪಟ್ಟಿದ್ದಾರೆ. 1,754 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಒಟ್ಟು ಸಂಖ್ಯೆ 1,98, 747ಕ್ಕೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.