ADVERTISEMENT

ಉತ್ತರ ಪ್ರದೇಶದಲ್ಲಿ ಶಾಲೆಗಳು ಬಂದ್, 10 ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ

ಕೋವಿಡ್ 19 ಸೋಂಕಿನ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರ

ಪಿಟಿಐ
Published 15 ಏಪ್ರಿಲ್ 2021, 10:12 IST
Last Updated 15 ಏಪ್ರಿಲ್ 2021, 10:12 IST
ಕೋವಿಡ್‌ 19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಜಧಾನಿ ಲಖನೌ ನಗರದ ರೈಲ್ವೆ ನಿಲ್ದಾಣವನ್ನು ಸ್ವಚ್ಛಗೊಳಿಸುತ್ತಿರುವ ಸಿಬ್ಬಂದಿ (ಸಂಗ್ರಹ ಚಿತ್ರ)
ಕೋವಿಡ್‌ 19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಜಧಾನಿ ಲಖನೌ ನಗರದ ರೈಲ್ವೆ ನಿಲ್ದಾಣವನ್ನು ಸ್ವಚ್ಛಗೊಳಿಸುತ್ತಿರುವ ಸಿಬ್ಬಂದಿ (ಸಂಗ್ರಹ ಚಿತ್ರ)   

ಲಖನೌ: ಕೋವಿಡ್‌ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ 12ನೇ ತರಗತಿವರೆಗಿನ ಎಲ್ಲ ಶಾಲೆಗಳನ್ನು ಮೇ 15ರವರೆಗೆ ಮುಚ್ಚುವಂತೆ ಹಾಗೂ 10 ಮತ್ತು 12ನೇ ತರಗತಿಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮೇ 20ಕ್ಕೆ ಮುಂದೂಡಿ ಸರ್ಕಾರ ಗುರುವಾರ ಆದೇಶಿಸಿದೆ.

ಉತ್ತರ ಪ್ರದೇಶ ಪರೀಕ್ಷಾ ಮಂಡಳಿ ನಡೆಸುವ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಮೇ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ADVERTISEMENT

ಹಿಂದೆ ನಿಗದಿಪಡಿಸಿದ ವೇಳಾಪಟ್ಟಿಯಂತೆ ಉತ್ತರ ಪ್ರದೇಶ ಶಿಕ್ಷಣ ಮಂಡಳಿಯ ಎಲ್ಲ ಪರೀಕ್ಷೆಗಳು ಮೇ 8ರಿಂದ ಆರಂಭವಾಗಬೇಕಿತ್ತು. ಕೋವಿಡ್‌ ಸೋಂಕು ಹೆಚ್ಚುತ್ತಿರುವ ಕಾರಣದಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸದ್ಯ ಉತ್ತರ ಪ್ರದೇಶದ ಹತ್ತು ಜಿಲ್ಲೆಗಳಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 7ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಸದ್ಯ ರಾಜ್ಯದಲ್ಲಿ 2 ಸಾವಿರ ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. ಕೋವಿಡ್ ಪ್ರಕರಣಗಳು ಹೆಚ್ಚಿರುವ ಲಖನೌ, ಅಲಹಾಬಾದ್‌, ವಾರಾಣಸಿ, ಕಾನ್ಪುರ, ಗೌತಮ ಬುದ್ಧ ನಗರ, ಗಾಜಿಯಾಬಾದ್‌, ಮೀರತ್ ಮತ್ತು ಗೋರಖ್‌ಪುರದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.