ADVERTISEMENT

ಜಮ್ಮು–ಕಾಶ್ಮೀರ: ಏಳು ಕೊರೊನಾ ಪ್ರಕರಣ ದೃಢ, ಸೋಂಕಿತರ ಸಂಖ್ಯೆ 45ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 13:19 IST
Last Updated 30 ಮಾರ್ಚ್ 2020, 13:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಕೋವಿಡ್‌–19ರ ಏಳು ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ.

ಕಾಶ್ಮೀರದ ಶ್ರೀನಗರ ಹಾಗೂ ಶೋಫಿಯಾನ್‌ನಲ್ಲಿ ತಲಾ ಎರಡು ಹಾಗೂ ಜಮ್ಮು ವಿಭಾಗದಲ್ಲಿ ಮೂರು ಪ್ರಕರಣಗಳು ದೃಢಪಟ್ಟಿವೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ವಕ್ತಾರ ರೋಹಿತ್‌ ಕನ್ಸಲ್‌ ತಿಳಿಸಿದ್ದಾರೆ.

ಕಣಿವೆ ಪ್ರದೇಶದಲ್ಲಿ ಮೊದಲ ಬಾರಿ ಕೋವಿಡ್‌ ಸೋಂಕು ದೃಢಪಟ್ಟಿದ್ದ ಇಲ್ಲಿನ ಖನಿಯಾರ್‌ ಪ್ರದೇಶದ ನಿವಾಸಿಯಾದ 65 ವರ್ಷದ ಮಹಿಳೆಗೆ ಭಾನುವಾರ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದಿದೆ ಎಂದು ಎಸ್‌ಕೆಐಎಂಎಸ್‌ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ವಿವಿಧ ಆಸ್ಪತ್ರೆಗಳ ಕ್ವಾರಂಟೈನ್‌ನಲ್ಲಿದ್ದ ನೂರಾರು ವಿದ್ಯಾರ್ಥಿಗಳನ್ನು ಸೋಮವಾರ ಮನೆಗೆ ಕಳುಹಿಸಲಾಗಿದ್ದು, ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.