ADVERTISEMENT

ತುರ್ತು ಬಳಕೆಗೆ ಹೆಚ್ಚುವರಿ ಆಮ್ಲಜನಕ ಸಂಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

ಪಿಟಿಐ
Published 3 ಮೇ 2021, 5:51 IST
Last Updated 3 ಮೇ 2021, 5:51 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ತುರ್ತು ಪರಿಸ್ಥಿತಿ ಎದುರಿಸಲು ಅಗತ್ಯವಿರುವಷ್ಟು ಆಮ್ಲಜನಕವನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಡಿ.ವೈ.ಚಂದ್ರೂಡ್‌ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದ್ದು, ‘ಹೆಚ್ಚುವರಿ ಆಮ್ಲಜನಕ ಸಂಗ್ರಹವನ್ನು ವಿಕೇಂದ್ರಿಕರಣಗೊಳಿಸಬೇಕು ಎಂದು ಸೂಚಿಸಿದೆ.

‘ಇದರಿಂದ, ನಿತ್ಯದ ಆಮ್ಲಜನಕ ಪೂರೈಕೆಯಲ್ಲಿ ತುಸು ವ್ಯತ್ಯಾಸವಾದರೂ, ತಕ್ಷಣವೇ ಸರಿಪಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ADVERTISEMENT

‘ಮುಂದಿನ ನಾಲ್ಕು ದಿನಗಳಲ್ಲಿ ತುರ್ತು ಬಳಕೆಗೆ ಬೇಕಾಗುವ ಆಮ್ಲಜನಕವನ್ನು ಸಂಗ್ರಹಿಸಬೇಕು. ಈ ದಾಸ್ತಾನು ಪ್ರತಿ ರಾಜ್ಯ ಮತ್ತು ಕೇಂದ್ರಾಳಿತ ಪ್ರದೇಶಕ್ಕೆ ಪೂರೈಕೆಯಾಗುತ್ತಿರುವುದನ್ನು ವರ್ಚುವಲ್ ಕಂಟ್ರೋಲ್ ರೂಮ್ ಮೂಲಕ ಮೇಲ್ವಿಚಾರಣೆ ಮಾಡಬೇಕು. ಇದು ದಿನ ನಿತ್ಯ ರಾಜ್ಯಗಳಿಗೆ ಪೂರೈಕೆಯಾಗುವ ಆಮ್ಲಜನಕದ ಜತೆಗೆ, ಹೆಚ್ಚುವರಿಯಾಗಿ ಪೂರೈಸಬೇಕು‘ ಎಂದು ನ್ಯಾಯಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.