ADVERTISEMENT

ದೆಹಲಿಯಲ್ಲಿ ಕೋವಿಡ್ ಹೊಸ ಪ್ರಕರಣಗಳು ದೃಢ: ಸಿದ್ಧತೆ ಬಗ್ಗೆ ಆಸ್ಪತ್ರೆಗಳಿಗೆ ಸೂಚನೆ

ಪಿಟಿಐ
Published 24 ಮೇ 2025, 2:51 IST
Last Updated 24 ಮೇ 2025, 2:51 IST
<div class="paragraphs"><p>ದೆಹಲಿ&nbsp;ಆಸ್ಪತ್ರೆಗಳಲ್ಲಿ ಸಿದ್ಧತೆ</p></div>

ದೆಹಲಿ ಆಸ್ಪತ್ರೆಗಳಲ್ಲಿ ಸಿದ್ಧತೆ

   

–ಪಿಟಿಐ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಇದರ ಬೆನ್ನಲ್ಲೇ ಸರ್ಕಾರವು ಎಲ್ಲಾ ಆಸ್ಪತ್ರೆಗಳು ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಸೇರಿದಂತೆ ಲಸಿಕೆಗಳ ಲಭ್ಯತೆ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.

ADVERTISEMENT

ಸುಮಾರು ಮೂರು ವರ್ಷಗಳ ನಂತರ ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ.

‘ದೆಹಲಿಯಲ್ಲಿ 23 ಕೋವಿಡ್ ಪ್ರಕರಣಗಳು ವರದಿಯಾಗಿವೆ. ರೋಗಿಗಳು ದೆಹಲಿಯ ನಿವಾಸಿಗಳೇ ಅಥವಾ ಹೊರಗಿನವರೇ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಪ್ರಯಾಣದ ವಿವರಗಳನ್ನು ಪರಿಶೀಲನೆ ನಡೆಸಲಾಗು‍ತ್ತಿದೆ’ ಎಂದು ಆರೋಗ್ಯ ಸಚಿವ ಪಂಕಜ್ ಸಿಂಗ್ ತಿಳಿಸಿದ್ದಾರೆ.

ಸದ್ಯ ಸೋಂಕು ದೃಢಪಟ್ಟಿರುವ ಪ್ರಕರಣಗಳು ಖಾಸಗಿ ಪ್ರಯೋಗಾಲಯಗಳಿಂದ ಬಂದಿರುವ ವರದಿಯಾಗಿವೆ. ಕೋವಿಡ್‌ ರೂಪಾಂತರವು ಸಾಮಾನ್ಯ ಗುಣಲಕ್ಷಣಗಳನ್ನು ಹೊಂದಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ಎಲ್ಲಾ 23 ಕೋವಿಡ್ ರೋಗಿಗಳ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ನಾವು ಈಗಾಗಲೇ ಆಸ್ಪತ್ರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ. ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ನಾವು ಸಿದ್ಧರಿದ್ದೇವೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸಲು ಎಂಟು ಹಿರಿಯ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ ಎಂದು ಸಿಂಗ್ ವಿವರಿಸಿದ್ದಾರೆ.

2020ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ಮೊದಲ ಕೋವಿಡ್ ಪ್ರಕರಣ ವರದಿಯಾಗಿತ್ತು. ದೆಹಲಿ ಕೊರೊನಾ ವೆಬ್‌ಸೈಟ್ ಪ್ರಕಾರ ರಾಷ್ಟ್ರ ರಾಜಧಾನಿಯಲ್ಲಿ 2022ರ ಜನವರಿ 7 ರವರೆಗೆ 15 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದರು.

ಗುರುವಾರ ಗುಜರಾತ್‌ನಲ್ಲಿ 15 ಹೊಸ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿದ್ದರೆ, ಹರಿಯಾಣದ ಗುರುಗ್ರಾಮ್ ಮತ್ತು ಫರಿದಾಬಾದ್‌ನಿಂದ ಮೂರು ಕೋವಿಡ್ -19 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಕೇರಳದಲ್ಲಿ ಮೇ ತಿಂಗಳಲ್ಲಿ 182 ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದರು. ಇತ್ತ ಕರ್ನಾಟಕದಲ್ಲಿ 35 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಚಿತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.