ADVERTISEMENT

Covid -19 Updates | ದೇಶದಲ್ಲಿ 305 ಹೊಸ ಪ್ರಕರಣ: ಕರ್ನಾಟಕದಲ್ಲಿ ಒಂದು ಸಾವು

ಪಿಟಿಐ
Published 18 ಜನವರಿ 2024, 9:37 IST
Last Updated 18 ಜನವರಿ 2024, 9:37 IST
ಕೋವಿಡ್‌–19 ಪ್ರಕರಣಗಳು
ಕೋವಿಡ್‌–19 ಪ್ರಕರಣಗಳು    

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 305 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,439 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಗುರುವಾರ ತಿಳಿಸಿದೆ.

ಒಂದು ದಿನದ ಅವಧಿಯಲ್ಲಿ ಕೋವಿಡ್‌–19 ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಈ ಪೈಕಿ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗುಜರಾತ್‌ನ ತಲಾ ಒಬ್ಬರು ಎಂದು ವರದಿಯಾಗಿದೆ.

2023ರ ಡಿಸೆಂಬರ್ 5ರವರೆಗೆ ದೈನಂದಿನ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಕಡಿಮೆಯಾಗಿತ್ತು, ಆದರೆ ಹೊಸ ರೂಪಾಂತರಿ ಮತ್ತು ಶೀತ ಹವಾಮಾನದಿಂದಾಗಿ ಪ್ರಕರಣಗಳು ಸಂಖ್ಯೆ ಮತ್ತೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ADVERTISEMENT

ದೇಶದಾದ್ಯಂತ 2020ರ ಆರಂಭದಲ್ಲಿ ಕೋವಿಡ್‌–19 ಸಾಂಕ್ರಾಮಿಕ ರೋಗದ ಪ್ರಕರಣಗಳು ವರದಿಯಾದವು. ಸುಮಾರು ನಾಲ್ಕು ವರ್ಷಗಳಲ್ಲಿ ರಾಷ್ಟ್ರದಾದ್ಯಂತ 4.5 ಕೋಟಿಗೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದರು. ಇದರಲ್ಲಿ 5.3 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸಚಿವಾಲಯದ ಅಧಿಕೃತ ವೆಬ್‌ಸೈಟ್ ಪ್ರಕಾರ, ದೇಶದಾದ್ಯಂತ ಕೋವಿಡ್–19 ಸೋಂಕಿನಿಂದ 4.4 ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ಶೇಕಡಾ 98.81ರಷ್ಟು ಮಂದಿ ಚೇತರಿಸಿಕೊಂಡಿದ್ದಾರೆ. ಇದುವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.