ADVERTISEMENT

ವಿಜ್ಞಾನಿಗಳನ್ನು ಅಭಿನಂದಿಸದ ರಾಹುಲ್ ಗಾಂಧಿ; ಬಿಜೆಪಿ ನಾಯಕರ ಕಿಡಿ

ಪಿಟಿಐ
Published 17 ಜನವರಿ 2021, 2:39 IST
Last Updated 17 ಜನವರಿ 2021, 2:39 IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ   

ನವದೆಹಲಿ: ದೇಶಾದ್ಯಂತ ಕೋವಿಡ್-19 ಲಸಿಕೆ ಹಂಚಿಕೆಗೆ ಪ್ರಧಾನಿ ನರೇಂದ್ರ ಮೋದಿ ಜನವರಿ 16 ಶನಿವಾರದಂದು ಚಾಲನೆ ನೀಡಿದ್ದಾರೆ. ಈ ಮಧ್ಯೆ ವಿಜ್ಞಾನಿಗಳ ಸಾಧನೆಯನ್ನು ದೇಶವೇ ಕೊಂಡಾಡುತ್ತಿರುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸದಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೋವಿಡ್-19 ಲಸಿಕೆ ಹೊರತರುವ ಸರಕಾರದ ಪ್ರಯತ್ನಗಳಿಗೆ ಅನುಮಾನ ವ್ಯಕ್ತಪಡಿಸುತ್ತಲೇ ಬಂದಿರುವ ರಾಹುಲ್ ಗಾಂಧಿ, ಲಸಿಕೆ ಬಿಡುಗಡೆಯಾದಾಗ ವಿಜ್ಞಾನಿಗಳು ಹಾಗೂ ಆರೋಗ್ಯ ಕಾರ್ತಕರ್ತರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲು ಒಂದೇ ಒಂದು ಮಾತನ್ನು ಆಡಿಲ್ಲ ಎಂದು ಬಿಜೆಪಿ ನಾಯಕರು ಟೀಕೆ ಮಾಡಿದ್ದಾರೆ.

ಈ ಬಗ್ಗೆ ಬಿಜೆಪಿ ಐಟಿ ಸೆಲ್ ಉಸ್ತುವಾರಿ ವಹಿಸಿರುವ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದಾರೆ. ಕೋವಿಡ್-19 ಲಸಿಕೆ ಹೊರತರುವ ಸರ್ಕಾರದ ಎಲ್ಲ ಪ್ರಯತ್ನಗಳ ಬಗ್ಗೆ ರಾಹುಲ್ ಗಾಂಧಿ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ವಿಶ್ವದ ಅತಿ ದೊಡ್ಡ ಲಸಿಕೆ ಹಂಚಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದಾಗ ಅದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲು ರಾಹುಲ್ ಗಾಂಧಿ ಒಂದೇ ಒಂದು ಟ್ವೀಟ್ ಮಾಡಲಿಲ್ಲ. ಕನಿಷ್ಠ ಪಕ್ಷ ಭಾರತೀಯ ವಿಜ್ಞಾನಿಗಳು ಹಾಗೂ ಆರೋಗ್ಯ ಕಾರ್ಯಕರ್ತರನ್ನು ಅಭಿನಂದಿಸಿಲ್ಲ ಎಂದು ಆರೋಪಿಸಿದರು.

ADVERTISEMENT

ಈ ಹಿಂದೆ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ಪದೇ ಪದೇ ಆರೋಪಿಸಿದ್ದರು.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಹ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದರು. ಕೋವಿಡ್-19 ಲಸಿಕೆ ಉತ್ಪಾದಿಸುವ ಭಾರತದ ಸಾಮರ್ಥ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದವರೆಲ್ಲ ಈಗ ಮುಜುಗರಕ್ಕೊಳಗಾಗಿ ಸ್ವಯಂ ಅನುಮಾನದ ವಿರುದ್ಧ ಲಸಿಕೆ ಹಾಕಿಸಿಕೊಳ್ಳಬಹುದು ಎಂದುವ್ಯಂಗ್ಯ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.