ADVERTISEMENT

ಅಹಮದಾಬಾದ್‌: 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸ್ಥಗಿತ

ಪಿಟಿಐ
Published 4 ಮೇ 2021, 10:24 IST
Last Updated 4 ಮೇ 2021, 10:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಹಮದಾಬಾದ್‌: ‘ಅಹಮದಾಬಾದ್‌ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆ ನೀಡುವುದನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಕೋವಿಡ್‌ ಲಸಿಕೆಯ ಕೊರತೆ ಉಂಟಾಗಿದೆ. ಹಾಗಾಗಿ ನಗರದ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮುಂಚೂಣಿ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಲಸಿಕೆ ದಾಸ್ತಾನುಗೊಂಡ ಬಳಿಕ ಅರ್ಹ ನಾಗರಿಕರಿಗೆ ಲಸಿಕೆಯನ್ನು ನೀಡಲಾಗುವುದು’ ಎಂದು ಅಹಮದಾಬಾದ್‌ ಮಹಾನಗರ ಪಾಲಿಕೆ(ಎಎಂಸಿ) ತಿಳಿಸಿದೆ.

‘ಸೂರತ್‌ನಲ್ಲೂ 45 ವರ್ಷ ಮೇಲ್ಪಟ್ಟವರಿಗೆ, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್‌ಶೀಲ್ಡ್‌ ಲಸಿಕೆಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ. ಬುಧವಾರವೂ ಲಸಿಕೆ ಲಭ್ಯವಿರುವುದಿಲ್ಲ’ ಎಂದು ಸೂರತ್‌ ಮಹಾನಗರ ಪಾಲಿಕೆ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.