ADVERTISEMENT

ಆರೋಗ್ಯ ಕಾರ್ಯಕರ್ತರಿಗೆ ಸರ್ಕಾರಿ ಲಸಿಕಾ ಕೇಂದ್ರಗಳಲ್ಲೇ ನೋಂದಣಿ ಸೌಲಭ್ಯ

ಆರೋಗ್ಯ ಕಾರ್ಯಕರ್ತರಿಗಾಗಿ ಮಾತ್ರ ಈ ವ್ಯವಸ್ಥೆ: ಆರೋಗ್ಯ ಸಚಿವಾಲಯ ಸ್ಪಷ್ಟನೆ

ಪಿಟಿಐ
Published 6 ಏಪ್ರಿಲ್ 2021, 10:09 IST
Last Updated 6 ಏಪ್ರಿಲ್ 2021, 10:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಆರೋಗ್ಯ ಕಾರ್ಯಕರ್ತರು ಹಾಗೂ ಲಸಿಕೆ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದು ಕಾರ್ಯ ನಿರ್ವಹಿಸುತ್ತಿರುವ 18 ರಿಂದ 44 ವರ್ಷ ವಯೋಮಾನದ ಸಿಬ್ಬಂದಿಗಾಗಿ ಸರ್ಕಾರಿ ‘ಕೋವಿಡ್‌ ಲಸಿಕೆ ಕೇಂದ್ರ’ಗಳಲ್ಲಿಯೇ ನೋಂದಣಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

‘ಭಾವಚಿತ್ರ ಇರುವ ಮೂಲ ಗುರುತಿನಚೀಟಿ, ಉದ್ಯೋಗಕ್ಕೆ ಸಂಬಂಧಿಸಿದ ಪ್ರಮಾಣಪತ್ರದ ನಕಲು ಪ್ರತಿ ತೋರಿಸಿ ನೋಂದಾಯಿಸಿಕೊಳ್ಳಬೇಕು’ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ತಿಳಿಸಿದ್ದಾರೆ.

ಈ ಸಂಬಂಧ ಅವರು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ.

ADVERTISEMENT

‘ಲಸಿಕೆ ಹಾಕಿಸಿಕೊಳ್ಳದೇ ಇರುವ ಆರೋಗ್ಯ ಕಾರ್ಯಕರ್ತರು (ಎಚ್‌ಸಿಡಬ್ಲ್ಯು) ಹಾಗೂ ಮುಂಚೂಣಿ ಕಾರ್ಯಕರ್ತರಿಗಾಗಿ (ಎಫ್‌ಎಲ್‌ಡಬ್ಲ್ಯು) ಸ್ಥಳದಲ್ಲಿಯೇ ನೋಂದಣಿ ಸೌಲಭ್ಯವನ್ನು ಕಲ್ಪಿಸಲಾಗಿದೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

‘ಅರ್ಹತೆ ಇಲ್ಲದಿದ್ದರೂ ಕೆಲವು ಕಾರ್ಯಕರ್ತರು ನೋಂದಣಿ ಮಾಡಿಸಿ, ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಲಸಿಕೆ ಹಾಕಿಸಿಕೊಳ್ಳುತ್ತಿರುವುದು ಕಂಡು ಬಂದಿದೆ. ಹೀಗಾಗಿ ಲಸಿಕಾ ಕೇಂದ್ರದಲ್ಲಿಯೇ ನೋಂದಣಿ ಸೌಲಭ್ಯವನ್ನು ಆರಂಭಿಸಲಾಗಿದೆ’ ಎಂದೂ ಅವರು ಪತ್ರದಲ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.