ADVERTISEMENT

ಕೋವಿಡ್: 18 ದಾಟಿದವರಿಗೆ ಮುನ್ನೆಚ್ಚರಿಕೆ ಡೋಸ್‌

ಪಿಟಿಐ
Published 8 ಏಪ್ರಿಲ್ 2022, 19:38 IST
Last Updated 8 ಏಪ್ರಿಲ್ 2022, 19:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್‌–19 ಲಸಿಕೆಯ ಮುನ್ನೆಚ್ಚರಿಕೆ ಡೋಸ್‌ ಅನ್ನು ಭಾನುವಾರದಿಂದ ನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡಿಕೆಯ ಖಾಸಗಿ ಕೇಂದ್ರಗಳಲ್ಲಿ ಇದು ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್‌–19 ಲಸಿಕೆಯ ಎರಡನೇ ಡೋಸ್‌ ಹಾಕಿಸಿಕೊಂಡು ಒಂಬತ್ತು ತಿಂಗಳು ಪೂರ್ಣಗೊಂಡಿರುವ, 18 ವರ್ಷ ಮೀರಿದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಲು ಅರ್ಹರು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಅವರು ಟ್ವೀಟ್‌ ಮಾಡಿದ್ದಾರೆ.

ಕೋವಿಡ್‌ ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ದಾಟಿದವರಿಗೆ ಮಾತ್ರ ಮುನ್ನೆಚ್ಚರಿಕೆ ಡೋಸ್‌ ಹಾಕಿಸಿಕೊಳ್ಳಲು ಈವರೆಗೆ ಅವಕಾಶ ಇತ್ತು. ಈ ಎರಡು ವರ್ಗಕ್ಕೆ ಮಾತ್ರ ಮುನ್ನೆಚ್ಚರಿಕೆ ಡೋಸ್ ಉಚಿತವಾಗಿ ಲಭ್ಯವಾಗಲಿದೆ. ಉಳಿದವರು ಖಾಸಗಿ ಕೇಂದ್ರಗಳಲ್ಲಿ ಹಣ ಪಾವತಿಸಿಯೇ ಲಸಿಕೆ ಹಾಕಿಸಿಕೊಳ್ಳಬೇಕಾಗುತ್ತದೆ.

ADVERTISEMENT

ಸೀರಂ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಿಯಾ ತಯಾರಿಸುವ ಕೋವಿಡ್‌ ಲಸಿಕೆ ಕೋವಿಶೀಲ್ಡ್‌ನ ಮುನ್ನೆಚ್ಚರಿಕೆ ಡೋಸ್‌ಗೆ ₹600 ನಿಗದಿ ಮಾಡಲಾಗಿದೆ.20 ಕೋಟಿ ಡೋಸ್‌ಗಳು ಸದ್ಯಕ್ಕೆ ಲಭ್ಯ ಇವೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್‌ ಪೂನಾವಾಲಾ ತಿಳಿಸಿದ್ದಾರೆ. ಮೂರು ತಿಂಗಳಲ್ಲಿ ಅರ್ಹ ಎಲ್ಲರಿಗೂ ಲಸಿಕೆ ಹಾಕುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.