ನವದೆಹಲಿ (ಪಿಟಿಐ): ಅಮೆರಿಕದಲ್ಲಿ ಕೋವಿಡ್ ಉಲ್ಬಣಕ್ಕೆ ಕಾರಣವಾದ ಕೋವಿಡ್–19ರ ರೂಪಾಂತರಿ ಎಕ್ಸ್‌ಬಿಬಿ 1.5 ತಳಿಯ 26 ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆ ಐಎನ್‌ಎಸ್‌ಸಿಒಜಿ ಸೋಮವಾರ ತಿಳಿಸಿದೆ.
ದೆಹಲಿ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ತಳಿ ಪತ್ತೆಯಾಗಿದೆ ಎಂದು ತಿಳಿಸಿದೆ. ‘ಎಕ್ಸ್‌ಬಿಬಿ.1.5’ ತಳಿಯು ‘ಓಮೈಕ್ರಾನ್ ಎಕ್ಸ್‌ಬಿಬಿ’ ತಳಿಗೆ ಸಂಬಂಧಿಸಿದ್ದು ಎಂದು ಹೇಳಲಾಗಿದೆ.
ಹಾಗೆಯೇ ಚೀನಾದಲ್ಲಿ ಸೋಂಕು ಉಲ್ಬಣಕ್ಕೆ ಕಾರಣವಾಗಿರುವ ಬಿಎಫ್.7 ತಳಿಯ 14 ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.