ADVERTISEMENT

ವಿದೇಶದಿಂದ ಭಾರತಕ್ಕೆ ಆಗಮಿಸುವವರಿಗೆ ಆರ್‌ಟಿ–ಪಿಸಿಆರ್ ಟೆಸ್ಟ್ ಕಡ್ಡಾಯ: ಮಾಂಡವಿಯಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಡಿಸೆಂಬರ್ 2022, 6:49 IST
Last Updated 24 ಡಿಸೆಂಬರ್ 2022, 6:49 IST
ಮನ್‌ಸುಖ್ ಮಾಂಡವಿಯಾ
ಮನ್‌ಸುಖ್ ಮಾಂಡವಿಯಾ    

ನವದೆಹಲಿ: ಭಾರತಕ್ಕೆ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಆರ್‌ಟಿ–ಪಿಸಿಆರ್ಪರೀಕ್ಷೆ ಮಾಡಿಸಿರುವುದು ಕಡ್ಡಾಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ಹೇಳಿದ್ದಾರೆ.

‘ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್‌ಕಾಂಗ್‌, ಥೈಲ್ಯಾಂಡ್‌ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್‌ ಲಕ್ಷಣಗಳು ಕಂಡುಬಂದರೆ ಕೂಡಲೇ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ’ ಎಂದು ಮಾಂಡವಿಯಾ ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.

ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ದಿಢೀರ್‌ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕಣ್ಗಾವಲು ಹೆಚ್ಚಿಸಲು ಹಾಗೂ ಲಸಿಕೀಕರಣಕ್ಕೆ ಒತ್ತು ನೀಡಲು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

ADVERTISEMENT

ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸುವುದು ಸೇರಿ ಕೋವಿಡ್‌ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಜ್ಞರು ನಾಗರಿಕರಿಗೆ ಸಲಹೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.