ADVERTISEMENT

ಚಾರ್‌ಧಾಮ್ ಯಾತ್ರೆ ಮೇಲಿನ ನಿಷೇಧ ತೆರವು ಮಾಡಿದ ನೈನಿತಾಲ್ ಹೈಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಸೆಪ್ಟೆಂಬರ್ 2021, 9:45 IST
Last Updated 16 ಸೆಪ್ಟೆಂಬರ್ 2021, 9:45 IST
ಐಸ್ಟಾಕ್ ಚಿತ್ರ
ಐಸ್ಟಾಕ್ ಚಿತ್ರ   

ನೈನಿತಾಲ್: ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಉತ್ತರಾಖಂಡದ ಚಾರ್‌ಧಾಮ್ ಯಾತ್ರೆ ಮೇಲಿನ ನಿಷೇಧವನ್ನು ನೈನಿತಾಲ್ ಹೈಕೋರ್ಟ್ ತೆರವುಗೊಳಿಸಿದೆ.

ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಯಾತ್ರಾರ್ಥಿಗಳಿಗೆ ಸೂಚಿಸಿದೆ.

ಪ್ರತಿ ದಿನ, ಕೇದಾರನಾಥದಲ್ಲಿ 800, ಬದರೀನಾಥದಲ್ಲಿ 1,200, ಗಂಗೋತ್ರಿಯಲ್ಲಿ 600 ಮತ್ತು ಯಮುನೋತ್ರಿ ಧಾಮದಲ್ಲಿ 400 ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ADVERTISEMENT

ಇದೇವೇಳೆ, ಭಕ್ತರಿಗೆ ಕೋವಿಡ್ ನೆಗೆಟಿವ್ ವರದಿ ಮತ್ತು ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡ ಪ್ರಮಾಣಪತ್ರ ತರುವುದನ್ನು ಕೋರ್ಟ್ ಕಡ್ಡಾಯಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.