ADVERTISEMENT

ಮಹಾರಾಷ್ಟ್ರದಲ್ಲಿ ಇಂದು 694 ಸೋಂಕಿತರು ಪತ್ತೆ: ಅಕ್ಟೋಬರ್‌ ನಂತರ ಅಧಿಕ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಮಾರ್ಚ್ 2023, 15:53 IST
Last Updated 30 ಮಾರ್ಚ್ 2023, 15:53 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮುಂಬೈ: ಮಹಾರಾಷ್ಟ್ರದಲ್ಲಿ ಗುರುವಾರ 694 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 2022 ಅಕ್ಟೋಬರ್‌ನ ನಂತರ ದಿನವೊಂದರಲ್ಲಿ ವರದಿಯಾದ ಅತಿ ಹೆಚ್ಚು ಪ್ರಕರಣ ಇದಾಗಿದೆ.

ಇದರೊಂದಿಗೆ ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,016 ಕ್ಕೆ ಏರಿದೆ. ಆದರೆ, ಯಾವುದೇ ಸಾವು ಸಂಭವಿಸಿಲ್ಲ.

ಒಟ್ಟು 184 ರೋಗಿಗಳು ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಚೇತರಿಕೆ ಪ್ರಮಾಣ ಶೇ 98.14 ರಷ್ಟಿದೆ. ಪಾಸಿಟಿವಿಟಿ ದರ ಶೇ 9.40 ರಷ್ಟಿದೆ.

ADVERTISEMENT

ಇನ್ನು, ದೇಶದಲ್ಲಿ ಇಂದು 3,016 ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 13,509ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.