ADVERTISEMENT

ಕೇರಳ, ಮಹಾರಾಷ್ಟ್ರ ಸೇರಿ 5 ರಾಜ್ಯಗಳಲ್ಲಿ ಕೋವಿಡ್‌ ಹೆಚ್ಚಳ: ಕೇಂದ್ರ ಎಚ್ಚರಿಕೆ

ಐಎಎನ್ಎಸ್
Published 10 ಏಪ್ರಿಲ್ 2022, 2:37 IST
Last Updated 10 ಏಪ್ರಿಲ್ 2022, 2:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ದೇಶದ ಐದು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳು ಗಮನಾರ್ಹವಾಗಿ ಏರಿಕೆ ಕಂಡಿವೆ. ಹೀಗಾಗಿ ರೋಗ ನಿಯಂತ್ರಣಾ ಕ್ರಮಗಳನ್ನು ಮುಂದುವರಿಸುವಂತೆ ಆಯಾ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಶುಕ್ರವಾರ ಪತ್ರ ಬರೆದಿದೆ.

ಕೇರಳ, ಹರಿಯಾಣ, ಮಹಾರಾಷ್ಟ್ರ, ದೆಹಲಿ ಮತ್ತು ಮಿಜೋರಾಂನಲ್ಲಿ ಕೋವಿಡ್‌ ಪ್ರಕರಣಗಳು ಏರುತ್ತಿದ್ದು, ಸೋಂಕಿನ ಹರಡುವಿಕೆಯ ಮೇಲ್ವಿಚಾರಣೆಯನ್ನು ಮುಂದುವರಿಸುವಂತೆಯೂ,ಕೋವಿಡ್ ಹರಡುವಿಕೆಯನ್ನುನಿಯಂತ್ರಿಸಲುತ್ವರಿತ ಕ್ರಮಗಳನ್ನು ಕೈಗೊಳ್ಳುವಂತೆಯೂ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಕೋವಿಡ್‌ ಹರಡುವಿಕೆಯ ಮೇಲೆ ನಿಗಾ ವಹಿಸಬೇಕು. ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಈ ಐದು ರಾಜ್ಯಗಳಿಗೆ ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

ಕೇರಳದಲ್ಲಿ ಕಳೆದ ವಾರ (ಏಪ್ರಿಲ್ 8 ಕ್ಕೆಕೊನೆಗೊಂಡಂತೆ) 2321 ಹೊಸ ಪ್ರಕರಣಗಳು ವರದಿಯಾಗಿವೆ.ಇದು, ಭಾರತದಲ್ಲಿ ವರದಿಯಾದ ಒಟ್ಟು ಹೊಸ ಪ್ರಕರಣಗಳಲ್ಲಿ ಶೇ 31.8ರಷ್ಟು.ಕೋವಿಡ್‌ ಪಾಸಿಟಿವಿಟಿ ದರ ಅಲ್ಲಿಶೇ 13.45 ರಿಂದ 15.53ಕ್ಕೆ ಹೆಚ್ಚಾಗಿದೆ ಎಂದು ಕೇಂದ್ರ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಏಪ್ರಿಲ್ 1ಕ್ಕೆ ಅಂತ್ಯಗೊಂಡ ಒಂದು ವಾರದ ಅವಧಿಯಲ್ಲಿ ದೆಹಲಿಯಲ್ಲಿ 724ಪ್ರಕರಣಗಳು ವರದಿಯಾಗಿದ್ದವು. ಅದೇ ಏಪ್ರಿಲ್ 8ರ ಹೊತ್ತಿಗೆ 826 ಹೊಸ ಪ್ರಕರಣಗಳು ವರದಿಯಾಗಿವೆ.ಪಾಸಿಟಿವಿಟಿ ದರದಲ್ಲಿ ಶೇ0.51 ರಿಂದ 1.25ರಷ್ಟುಹೆಚ್ಚಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಚೀನಾ, ಅಮೆರಿಕ ಮತ್ತು ಯೂರೋಪ್‌ನ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಕೊರೊನಾ ವೈರಸ್‌ನ ರೂಪಾಂತರ ತಳಿಯಾದ ಓಮೈಕ್ರಾನ್‌ನ ಉಪ ತಳಿಯೊಂದುಪತ್ತೆಯಾಗಿರುವುದುಆತಂಕಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.