ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಾರಣಾಂತಿಕ ಕೊರೊನಾ ವೈರಸ್ ಸೋಂಕು ಭಾರತವನ್ನು ಬೆಚ್ಚಿಬೀಳಿಸಿದೆ. ಈಗಾಗಲೇ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 1071 ಕ್ಕೆ ಏರಿದ್ದು, 29 ಜನರ ಬಲಿ ತೆಗೆದುಕೊಂಡಿದೆ.
ಆತಂಕದ ಸಂಗತಿ ಎಂದರೆ ಮಹಾರಾಷ್ಟ್ರದಲ್ಲಿ 12, ಗುಜರಾತಿನಲ್ಲಿ 6 ಹೊಸ ಪ್ರಕರಣಗಳು ದಾಖಲಾಗಿದ್ದು, ದೇಶದಾದ್ಯಂತ ಪ್ರಕರಣಗಳ ಸಂಖ್ಯೆ 1071 ಕ್ಕೆ ಏರಿದೆ.
ಕೇಂದ್ರ ಆರೋಗ್ಯ ಮತ್ತು ಕಲ್ಯಾಣ ಸಚಿವಾಲಯದ ಪ್ರಕಾರ, 100 ಕರೋನವೈರಸ್ ರೋಗಿಗಳು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ, ದೇಶದಲ್ಲಿ 900 ಕ್ಕೂ ಹೆಚ್ಚು ಸಕ್ರಿಯ ಕೋವಿಡ್-19 ಪ್ರಕರಣಗಳಿವೆ.
ಕರ್ನಾಟಕದಲ್ಲಿ 83, ಕೇರಳದಲ್ಲಿ 202, ಉತ್ತರ ಪ್ರದೇಶದಲ್ಲಿ 75, ರಾಜಸ್ಥಾನದಲ್ಲಿ 57, ದೆಹಲಿಯಲ್ಲಿ 72 ತೆಲಂಗಾಣದಲ್ಲಿ 65 ಪ್ರಕರಣಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೊಂದಿರುವ ವ್ಯಕ್ತಿಗಳು ಪತ್ತೆಯಾಗಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 200ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದಲ್ಲದೆ 722,350 ಸಾವಿರ ಜನರಿಗೆ ಸೋಂಕು ತಗುಲಿದೆ. ಕೋವಿಡ್-19ಗೆ ಜಾಗತಿಕವಾಗಿ 33,980ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.