ADVERTISEMENT

ಸರ್ಕಾರ ಕೊರೊನಾ ಸೋಂಕು ಪರೀಕ್ಷೆ ಪ್ರಮಾಣ ಹೆಚ್ಚಿಸಲಿ: ಪ್ರಿಯಾಂಕಾ ಗಾಂಧಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 7:17 IST
Last Updated 4 ಏಪ್ರಿಲ್ 2020, 7:17 IST
ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ   

ನವದೆಹಲಿ: ಕೊರೊನಾ ವೈರಸ್‌ ಸೋಂಕು ಪರೀಕ್ಷೆಯ ಪ್ರಮಾಣವನ್ನು ದೇಶದಲ್ಲಿ ತಕ್ಷಣವೇ ಹೆಚ್ಚಿಸಬೇಕೆಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಶನಿವಾರ ಒತ್ತಾಯಿಸಿದ್ದಾರೆ.

ಸೋಂಕಿನ ತೀವ್ರತೆ ಮತ್ತು ಅದು ಆವರಿಸುತ್ತಿರುವ ರೀತಿಯ ಬಗ್ಗೆ ಅತ್ಯಮೂಲ್ಯ ಮಾಹಿತಿಯನ್ನು ಪರೀಕ್ಷೆಗಳಿಂದ ಪಡೆಯಬಹುದು ಎಂದು ಕಾಂಗ್ರೆಸ್ ನಾಯಕಿ ಪ್ರತಿಪಾದಿಸಿದ್ದಾರೆ.

'ಭಾರತವು ಕೊರೊನಾ ಸೋಂಕಿನ ಪರೀಕ್ಷಾ ಪ್ರಮಾಣವನ್ನು ತಕ್ಷಣವೇ ಹೆಚ್ಚಿಸಬೇಕಿರುವುದು ಅನಿವಾರ್ಯ ಆಗಿದೆ. ಸೋಂಕು ಹರಡುವಿಗೆ, ಹರಡುವಿಕೆಯ ವಿಧಾನ ಮತ್ತು ಅದರ ಮೂಲಗಳನ್ನು ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಬೇಕಿದೆ' ಎಂದು ಪ್ರಿಯಾಂಕಾ ಟ್ವೀಟ್ ಮೂಲಕ ತಿಳಿಸಿದ್ದಾರೆ.

ADVERTISEMENT

ವೈದ್ಯಕೀಯ ಸಿಬ್ಬಂದಿಗೆ ರಕ್ಷಣಾ ಸಾಧನಗಳು ಸಿಗುತ್ತಿಲ್ಲ ಮತ್ತು ಅವರ ಸಂಬಳವನ್ನು ಕಡಿತಗೊಳಿಸಲಾಗುತ್ತಿದೆ ಎಂಬ ಆರೋಪವನ್ನು ಪ್ರಿಯಾಂಕಾ ಗಾಂಧಿ ಮಾಡಿದ್ದಾರೆ.

ಇಂತಹ ಸಮಯದಲ್ಲಿ ವೈದ್ಯಕೀಯ ಸಿಬ್ಬಂದಿಗೆ ಎಲ್ಲಾ ಸಹಕಾರ ನೀಡಬೇಕು ಎಂದು ಸರ್ಕಾರವನ್ನು ಉದ್ದೇಶಿಸಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.