ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,487 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 27 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 4,31,23,801ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,241 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 4,25,82,243 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 17,317 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ 0.74 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ 98.74 ರಷ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.