ADVERTISEMENT

Covid-19 India Update: 70 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಫೆಬ್ರುವರಿ 2021, 7:07 IST
Last Updated 11 ಫೆಬ್ರುವರಿ 2021, 7:07 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 12,923 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 108 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈ ವರೆಗೆ ಒಟ್ಟು 1,08,71,294 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,55,360 ಮಂದಿ ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 11,764 ಸೋಂಕಿತರು ಚೇತರಿಸಿಕೊಂಡಿದ್ದು, ಈ ವರೆಗೆ ಗುಣಮುಖರಾದವರ ಸಂಖ್ಯೆ 1,05,73,372ಕ್ಕೆ ತಲುಪಿದೆ. 1,42,562 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಜ.16ರಂದು ದೇಶದಾದ್ಯಂತ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿದೆ. ಇಲ್ಲಿವರೆಗೂ ಭಾರತದಲ್ಲಿ 70,17,114 ಮಂದಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ.

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ದೇಶದಲ್ಲಿ ತುರ್ತು ಬಳಕೆಗೆ ಭಾರತದ ಔಷಧ ನಿಯಂತ್ರಕ ಅನುಮೋದಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.